ಗೋಕಾಕ: ಸರ್ಕಾರವನ್ನು ಉರುಳಿಸೋ ಶಕ್ತಿ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಮಾತ್ರ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ.
ನಗರದ ಲಕ್ಷ್ಮೀ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಉಪ್ಪಾರ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಜಾರಕಿಹೊಳಿ ಕುಟುಂಬದವರಿಗೆ ಸರ್ಕಾರ ಉರುಳಿಸೋ ಶಕ್ತಿ ಇದೆ ಎಂದು ಎಲ್ಲೆಡೆ ಮಾಡನಾಡುತ್ತಿದ್ದಾರೆ. ಆದರೆ ರಾಜ್ಯ ರಾಜಕಾರಣದಲ್ಲಿ ನಾಲ್ವರು ರಾಜಕೀಯದಲ್ಲಿ ಇದ್ದೇವೆ. ನಾಲ್ವರು ಒಂದೇ ಎಂದು ಭಾವಿಸಬೇಡಿ. ನಾಲ್ವರ ಕೆಲಸವೂ ಬೇರೆ ಬೇರೆ ಇದೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದಿದ್ದಾರೆ.
ಸರ್ಕಾರ ಉರುಳಿಸುವ ಶಕ್ತಿ ರಮೇಶ ಜಾರಕಿಹೊಳಿ ಅವರಿಗೆ ಮಾತ್ರ ಇದೆ. ಶಾಸಕ ರಮೇಶ ಜಾರಕಿಹೊಳಿ ಅವರು ಇನ್ನೊಮ್ಮೆ ಸರ್ಕಾರವನ್ನು ಉರುಳಿಸುವ ಪ್ರಯತ್ನ ಮಾಡಲೆಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.
PublicNext
24/09/2022 10:00 pm