ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಹಿಡಕೊಂಡ ಬಂದ ನಾಯಿ ಬ್ಯಾಟಿ ಆಡಲ್ಲ; ವಿಜಯಾನಂದ ಕಾಶಪ್ಪನವರ

ಅಥಣಿ ಮತಕ್ಷೇತ್ರ ಅಭಿವೃದ್ಧಿಯಲ್ಲಿ ತೀರ ಹಿಂದುಳಿದಿದೆ. ಈ ಕ್ಷೇತ್ರದಿಂದ ಮಾಜಿ ಉಪಮುಖ್ಯಮಂತ್ರಿ, ಮಂತ್ರಿ, ಶಾಸಕರು ಆಯ್ಕೆಯಾದರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನು ಅಲ್ಲ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಪರೋಕ್ಷವಾಗಿ ಲಕ್ಷ್ಮಣ ಸವದಿ ಹಾಗೂ ಶಾಸಕ ಮಹೇಶ್ ಕುಮಟಳ್ಳಿ ವಿರುದ್ಧ ಹರಿಹಾಯ್ದಿದ್ದಾರೆ.

ತಾಲೂಕಿನ ಹಲ್ಯಾಳ ಗ್ರಾಮದ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾಧ್ಯಮ ಜೊತೆ ಮಾತನಾಡಿದ ಅವರು, ಅಥಣಿ ತಾಲೂಕಿನಲ್ಲಿ ಪಂಚಮಸಾಲಿ ಸಮಾಜ ಪ್ರಬಲವಾಗಿದ್ದರಿಂದ ಅಂದು ಕಾಂಗ್ರೆಸ್ ಪಕ್ಷ ಮಹೇಶ್ ಕುಮಟಳ್ಳಿ ಅವರನ್ನು ಅಭ್ಯರ್ಥಿಯಾಗಿ ಗೆಲ್ಲಿಸಲಾಗಿತ್ತು. ಆದರೆ ಪಕ್ಷ ನಿಷ್ಠೆ ತೋರದೆ ಪಕ್ಷ ಬಿಟ್ಟು ಹೋದರು. ಹೀಗಾಗಿ ಹಿಡುಕೊಂಡ ಬಂದ ನಾಯಿ ಯಾವತ್ತೂ ಬೇಟೆ ಆಡಲ್ಲ. ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನು ಅಲ್ಲವೆಂದು ಪರೋಕ್ಷವಾಗಿ ಮಹೇಶ್ ಕುಮಟಳ್ಳಿ ಅವರಿಗೆ ಟಾಂಗ್ ನೀಡಿದರು.

ಸದ್ಯ ಅಥಣಿಯಲ್ಲಿ ಪಂಚಮಸಾಲಿ ಸಮಾಜ ಓರ್ವ ಯುವಕ ಕಾಂಗ್ರೆಸ್ ಪಕ್ಷದಿಂದ ಗುರುತಿಸಿಕೊಂಡು, ಸಮಾಜಪರ ಕಾರ್ಯಗಳಿಂದ ಹೆಸರುವಾಸಿಯಾಗಿದ್ದಾರೆ. ಅವರಿಗೆ ಒಳ್ಳೆಯ ಭವಿಷ್ಯವಿದೆ ಎಂದು ಹೇಳುತ್ತಾ, ಅಥಣಿ ಬಿಜೆಪಿ ಭದ್ರಕೋಟೆಗೆ ಕಾಂಗ್ರೆಸ್ ಪಕ್ಷದ ಮೂಲಕ ಪಂಚಮಸಾಲಿ ಸಮಾಜ ಅಸ್ತ್ರ ಬಿಡಲು ತಯಾರಾಗಿದ್ದೇವೆ ಎಂದು ಪರೋಕ್ಷವಾಗಿ ವಿಜಯಾನಂದ ಕಾಶಪ್ಪನವರು ಹೇಳಿದರು.

ಇನ್ನು ಕೇವಲ 187 ದಿನಗಳಲ್ಲಿ ಸಾರ್ವತ್ರಿಕ ಚುನಾವಣೆ ಬರುತ್ತಿದೆ. ಶಿವಯೋಗಿ ನಾಡಿನಿಂದಲೇ ನಾವು ಪಕ್ಷ ಸಂಘಟನೆಗೆ ಮುಂದಾಗಿದ್ದೇವೆ ಎಂದು ಪಂಚಮಸಾಲಿ ಸಮಾಜ ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ಹೇಳಿದರು.

ಬೈಟ್: ವಿಜಯಾನಂದ ಕಾಶಪ್ಪನವರ, ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಶಾಸಕರು

Edited By :
PublicNext

PublicNext

27/09/2022 02:15 pm

Cinque Terre

23.1 K

Cinque Terre

0

ಸಂಬಂಧಿತ ಸುದ್ದಿ