ಖಾನಾಪೂರ : ಕಾಂಗ್ರೆಸ್ ಪಕ್ಷದ ವತಿಯಿಂದ ಹಾಗೂ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆಯ ನಮ್ಮರಾಜ್ಯದಲ್ಲಿ ಸರಿ ಸುಮಾರು 500 ಕಿ ಮೀ ನ ವರೆಗೆ ಪಾದಯಾತ್ರೆ ನಡೆಯಲಿದೆ.ಸದ್ಯ ಶಾಸಕಿ ಡಾ. ಅಂಜಲಿ ತಾಯಿ ಹೇಮಂತ್ ನಿಂಬಾಳ್ಕರ್ ಅವರನ್ನು ದಾವಣಗೆರೆ ಹಾಗೂ ಚಿತ್ರದುರ್ಗದ ಮಹಿಳಾ ಕಾಂಗ್ರೆಸನ ಉಸ್ತುವಾರಿಗಳಾಗಿ ಕೆಪಿಸಿಸಿ ಅಧ್ಯಕ್ಷರು ನೇಮಕ ಮಾಡಿದ್ದು ಅದರ ಪೂರ್ವಭಾವಿ ಸಭೆ ಬುಧವಾರ ನಡೆಯಿತು.
ಶಾಸಕಿ ಡಾ ಅಂಜಲಿ ತಾಯಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬಳಿಕ ಪಕ್ಷದ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರ ನಿವಾಸಕ್ಕೆ ತೆರಳಿ ಕುಶಲೋಪರಿ ವಿಚಾರಿಸಿ ಭಾರತ ಜೋಡೋ ಪಾದಯಾತ್ರೆಯ ಬಗ್ಗೆ ಚರ್ಚಿಸಿದರು.
Kshetra Samachara
29/09/2022 08:53 am