ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ :ಜಾರಕಿಹೊಳಿ, ಸವದಿಗೆ ಸಚಿವ ಸಂಪುಟ ಸ್ಥಾನಮಾನ ಕೊಡಲಿ : ಕುಮಠಳ್ಳಿ

ಅಥಣಿ : ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಮಾನ ನೀಡಲಿ ನನಗೆ ಸಚಿವ ಸ್ಥಾನಕ್ಕಿಂತಲೂ ನನ್ನ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ, ನನಗೆ ಸಚಿವ ಸಂಪುಟದಲ್ಲಿ ಸ್ಥಾನ ಬೇಡ ಎಂದು ಮಹೇಶ್ ಕುಮಠಳ್ಳಿ ಹೇಳಿಕೆ ನೀಡಿದ್ದಾರೆ.

ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆ ಉದ್ಘಾಟನೆ ನೆರವೇರಿಸಿ ಮಾತನಾಡಿ, ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ, ಅದರಿಂದ ನನಗೆ ಸಚಿವ ಸ್ಥಾನ ಬೇಡ ಎಂದು ಹೇಳಿ ನೀಡಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರಾ ಎಂಬ ಪ್ರಶ್ನೆ ಮೂಡಿಸಿದೆ, ಹಲವು ಬಾರಿ ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ ಅಥಣಿ ಶಾಸಕರು ಸದ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬ ಹಿನ್ನೆಲೆ, ಸಚಿವ ಸ್ಥಾನದ ಆಸೆ ಬಿಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ, ಹಾಗೂ ಅಥಣಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರಿಗೆ, ಈ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಲಿ ಹಾಗೂ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅವರು ಈ ಬಾರಿ ಸಚಿವ ಸಂಪುಟ ಲಿಸ್ಟ್ ನಲ್ಲಿ ಇದ್ದಾರೆ ಅವರಿಗೆ ಈ ಬಾರಿ ಕ್ಯಾಬಿನೆಟ್ ಸ್ಥಾನಮಾನ ಪಿಕ್ಸ್ ಎಂದು ಭವಿಷ್ಯ ನುಡಿದರು.

Edited By :
PublicNext

PublicNext

03/10/2022 09:48 pm

Cinque Terre

25.49 K

Cinque Terre

1

ಸಂಬಂಧಿತ ಸುದ್ದಿ