ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಟಿಳಕವಾಡಿ ರೈಲ್ವೆ ಗೇಟ್ ಮೇಲ್ಸೇತುವೆ ಉದ್ಘಾಟನೆ: ಇದು ಸುಗಮ ಸಂಚಾರಕ್ಕೆ ಅನುಕೂಲ ಎಂದ ಶಾಸಕ ಅಭಯ್ ಪಾಟೀಲ

ಬೆಳಗಾವಿ: ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 381ರ (ಟಿಳಕವಾಡಿ ಗೇಟ್ ಸಂಖ್ಯೆ 3) ರಸ್ತೆ ಮೇಲ್ ಸೇತುವೆ ನಿರ್ಮಾಣದಿಂದ ಸ್ಥಳೀಯ ಹಾಗೂ ಬೃಹತ್ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪ್ರಯಾಣಿಕರ ಸುರಕ್ಷತೆಗೆ ಅನುಕೂಲವಾಗಲಿದೆ. ರೈಲ್ವೆ ಹಳಿಗಳ ಬಳಿ ವಾಹನ ಪ್ರವೇಶ ಕೂಡ ಕಡಿಮೆಯಾಗಲಿವೆ. ಇದರಿಂದ ಅಪಘಾತ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ ಎಂದು ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅಭಯ ಪಾಟೀಲ್ ಅವರು ಹೇಳಿದರು.

ನಗರದ ಟಿಳಕವಾಡಿ 3ನೇ ರೈಲ್ವೆ ಗೇಟ್ ಬಳಿಯಲ್ಲಿ ಬುಧವಾರ ನಡೆದ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 381ಕ್ಕೆ (ತಿಳಕವಾಡಿ ಗೇಟ್ ಸಂಖ್ಯೆ 3) ಬದಲಾಗಿ ನಿರ್ಮಿಸಲಾಗಿರುವ ರಸ್ತೆ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈಲ್ವೆ ಗೇಟ್ ಮೇಲ್ಸೇತುವೆ ಮಾಜಿ ಸಂಸದರಾದ ದಿವಂಗತ ಸುರೇಶ ಅಂಗಡಿ ಅವರ ಕನಸಾಗಿತ್ತು. ಅವರ ಪರಿಶ್ರಮದ ಭಾಗವಾಗಿ ಈಗ ಸೇತುವೆ ನಿರ್ಮಾಣ ಮಾಡಲಾಯಿತು. ಬೆಳಗಾವಿಯ ಎಲ್ಲಾ ರೈಲ್ವೆ ಗೇಟ್ ಮೇಲ್ಸೇತುವೆಗಳ ನಿರ್ಮಾಣಕ್ಕೆ ದಿವಂಗತ ಸುರೇಶ ಅಂಗಡಿ ಅವರು ಕಾರಣ. ಬೆಳಗಾವಿ-ಧಾರವಾಡ ಹೊಸ ರೈಲ್ವೆ ಮಾರ್ಗ ಯೋಜನೆ ಕೂಡ ಅವರು ಹಾಕಿಕೊಟ್ಟ ಅಡಿಪಾಯ ಎಂದು ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅಭಯ ಪಾಟೀಲ ಅವರು ಹೇಳಿದರು.

ಶಾಲಾ ಮಕ್ಕಳು, ಕಚೇರಿ ಕೆಲಸಕ್ಕೆ ಹೋಗುವವರು, ಖಾನಾಪುರ, ಮಚ್ಚೆ, ಪೀರನವಾಡಿ ಸೇರಿದಂತೆ ಸ್ಥಳೀಯ ಭಾಗದ ವಾಹನ ಸವಾರರಿಗೆ ರೈಲ್ವೆ ಗೇಟ್ ಕ್ರಾಸ್ ಮಾಡಿ ಹೋಗಲು ತೊಂದರೆ ಇತ್ತು. ಈ ಸೇತುವೆ ನಿರ್ಮಾಣದಿಂದ ವಾಹನ ಸಂಚಾರರಿಗೆ ಹಾಗೂ ಸ್ಥಳೀಯರಿಗೆ ಅನುಕೂಲವಾಯಿತು ಎಂದು ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅನಿಲ ಬೆನಕೆ ಅವರು ತಿಳಿಸಿದರು.

Edited By : Nagesh Gaonkar
PublicNext

PublicNext

12/10/2022 09:22 pm

Cinque Terre

29.23 K

Cinque Terre

0

ಸಂಬಂಧಿತ ಸುದ್ದಿ