ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ರೀಡೆ ಹಾಗೂ ಶಿಕ್ಷಣ ಒಂದೇ ನಾಣ್ಯದ ಎರಡು ಮುಖ : ಕುಮಠಳ್ಳಿ

ಅಥಣಿ : ಕ್ರೀಡೆ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ . ಹೀಗಾಗಿ ಪ್ರತಿ ವಿದ್ಯಾರ್ಥಿ ಶಿಕ್ಷಣದ ಜತೆ ಕ್ರೀಡೆಯಲ್ಲಿ ಭಾಗವಹಿಸಿ ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತರಬೇಕು ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

ಅವರು ತಾಲೂಕಿನ ಸಂಕೋನಟ್ಟಿ ಗ್ರಾಮದ ವರ್ಧಮಾನ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡುತ್ತಾ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರಿ ಶಾಲೆಗಳು ಅಡಿಪಾಯವಾಗಿವೆ. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ, ದೈಹಿಕ ಬೆಳವಣಿಗೆಗೆ ಅನುಕೂಲವಾಗಲಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸೋಲು, ಗೆಲುವನ್ನು ಸಮವಾಗಿ ಸ್ವೀಕರಿಸಬೇಕು. ಪಾಲಕರು ಮಕ್ಕಳ ಆಸಕ್ತಿ ಗುರುತಿಸಿ ಸಹಕಾರ ನೀಡಬೇಕು ಎಂದರು.

ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಮಾತನಾಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.ಈ ವೇಳೆ ಶಿಕ್ಷಣ ಸಂಸ್ಥೆ ಅಧ್ಯಕ್ಷ ಅಮರ ದುರ್ಗಣ್ಣವರ ಅಧ್ಯಕ್ಷತೆ ವಹಿಸಿದ್ದರು, ತಹಸೀಲ್ದಾರ್ ಸುರೇಶ ಮುಂಜೆ, ಬಿ.ಬಿ ಖೋತ, ಮಹಾವೀರ ಪಡನಾಡ, ಎಸ್.ಎಂ. ರಾಠೋಡ, ಜಿ.ಎಂ. ಹಿರೇಮಠ, ತುಕಾರಾಮ ಬಾಗೇಣ್ಣವರ, ಜಿ.ಎಂ. ಅತ್ತಾರ, ಎಂ.ಎಚ್. ಜಮಖಂಡಿ, ಭರತ ಕಾಂಬಳೆ ಇತರರಿದ್ದರು.

Edited By : PublicNext Desk
Kshetra Samachara

Kshetra Samachara

01/10/2022 09:03 am

Cinque Terre

4.42 K

Cinque Terre

0