ಬಳ್ಳಾರಿ: ಸಾರಿಗೆ ಸಂಸ್ಥೆಯ ಬಸ್ ಚಾಲಕನ ಮೇಲೆ ವಿದ್ಯಾರ್ಥಿಯೋರ್ವ ಹಲ್ಲೆ ನಡೆಸಿದ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿ ಪವನ ಕುಮಾರ್ ಕರ್ತವ್ಯ ನಿರತ ಬಸ್ ಚಾಲಕ ಭೀಮಣ್ಣ ಎಂಬುವರ ಮೇಲೆ ಹಲ್ಲೆ ಮಾಡಿದ್ದಾನೆ. ಬಳ್ಳಾರಿಯಿಂದ ಕುರುಗೋಡಿಗೆ ಬರುತ್ತಿದ್ದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪವನ್ ಕುಮಾರ್ ಬಸ್‌ನಲ್ಲಿ ಗಟ್ಟಿಯಾಗಿ ಮಾತನಾಡುತ್ತಿದ್ದ. ಇದನ್ನು ಪ್ರಶ್ನಿಸಿದ ಚಾಲಕ ಮತ್ತು ನಿರ್ವಾಹಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಸ್ ಕುರುಗೋಡು ನಿಲ್ದಾಣಕ್ಕೆ ಬಂದ ತಕ್ಷಣ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ವಿದ್ಯಾರ್ಥಿ ಚಾಲಕನ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಚಾಲತಾಣದಲ್ಲಿ ಹರಿದಾಡುತ್ತಿದೆ. ಹಲ್ಲೆಗೊಳಗಾದ ಚಾಲಕ ಭೀಮಣ್ಣ ದೂರು ನೀಡಿದ್ದು, ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
03/01/2025 03:11 pm