", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/395416_1737693072_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PraveenMetreBidar" }, "editor": { "@type": "Person", "name": "8748919992" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೀದರ್ : ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದು, ಅದೇ ಬೈಕ್ ಮೇಲೆ ಸವಾರ ಮಾಡುತಿದ್ದ ಇನ್ನೊಬ್ಬ ವ್ಯಕ್ತಿ ಗಂಭೀರ...Read more" } ", "keywords": "Node,Bidar,Crime", "url": "https://publicnext.com/article/nid/Bidar/Crime" } ಬೀದರ್ : ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಬೈಕ್ ಸವಾರರು ಸಾವು - ಓರ್ವನಿಗೆ ಗಂಭೀರ ಗಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್ : ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಬೈಕ್ ಸವಾರರು ಸಾವು - ಓರ್ವನಿಗೆ ಗಂಭೀರ ಗಾಯ

ಬೀದರ್ : ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದು, ಅದೇ ಬೈಕ್ ಮೇಲೆ ಸವಾರ ಮಾಡುತಿದ್ದ ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ಭಾಲ್ಕಿ ತಾಲ್ಲೂಕಿನ ಪಾಂಡರಿ ಗ್ರಾಮದ ಬಳಿ ಇಂದು ಸಾಯಂಕಾಲ ಸಂಭವಿಸಿದೆ.

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯವರಾದ ನಾಗುರಾವ್ (40) ಹಾಗೂ ಭಾನುದಾಸ್ (42) ಮೃತ ವ್ಯಕ್ತಿಗಳಾಗಿದ್ದಾರೆ.

ಭಾಲ್ಕಿ ಕಡೆಯಿಂದ ಔರಾದ್ (ಬಿ) ಕಡೆಗೆ ಬೈಕ್ ಮೇಲೆ ಮೂವರು ಹೋಗುತಿದ್ದರು. ಮಾರ್ಗಮಧ್ಯ ಪಾಂಡರಿ ಗ್ರಾಮದ ಹತ್ತಿರ ಅಪರಿಚತ ವಾಹನವೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯಲ್ಲಿ ಬೈಕ್ ಸವಾರರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಚಂದು ಜಾಧವ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ವ್ಯಕ್ತಿಗೆ ಭಾಲ್ಕಿಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಮೇಹಕರ್ ಠಾಣೆಯ ಪೊಲೀಸರಿಂದ ಪರಿಶೀಲನೆ ನಡೆಸಿದ್ದಾರೆ.

Edited By : PublicNext Desk
Kshetra Samachara

Kshetra Samachara

24/01/2025 10:01 am

Cinque Terre

2.16 K

Cinque Terre

0