", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/418299-1737644383-AMANATHU.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Yohan Bidar" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಚಿಟಗುಪ್ಪ : ಸರ್ಕಾರಿ ಕೆಲಸ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟ ಗ್ರಾಮ ಲೆಕ್ಕಾಧಿಕಾರಿಯನ್ನು ಜಿಲ್ಲಾಧಿಕಾರಿಗಳು ಅಮಾನತ್ತು ಮಾಡಿದ್ದಾರೆ. ತಾಲೂ...Read more" } ", "keywords": "Bidar News, Gram Accountant Suspended, Bribery Case, Karnataka Corruption, Government Official Suspended, Bidar District, Anti-Corruption Drive, Government Employee Arrested.,Bidar,Crime,Law-and-Order", "url": "https://publicnext.com/article/nid/Bidar/Crime/Law-and-Order" }
ಚಿಟಗುಪ್ಪ : ಸರ್ಕಾರಿ ಕೆಲಸ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟ ಗ್ರಾಮ ಲೆಕ್ಕಾಧಿಕಾರಿಯನ್ನು ಜಿಲ್ಲಾಧಿಕಾರಿಗಳು ಅಮಾನತ್ತು ಮಾಡಿದ್ದಾರೆ. ತಾಲೂಕಿನ ಬೇಮಳಖೇಡಾ ಗ್ರಾಮ ಲೆಕ್ಕಾಧಿಕಾರಿ ನಿಂಗಪ್ಪ ಪುಜಾರಿ ಅಮಾನತ್ತುಗೊಂಡ ಗ್ರಾಮ ಲೆಕ್ಕಾಧಿಕಾರಿ.
ವ್ಯಕ್ತಿಯೊಬ್ಬನಿಗೆ ಕೆಲಸ ಮಾಡಿಕೊಡಲು ಲಂಚದ ಹಣಕ್ಕೆ ಬೇಡಿಕೆಯಿಟ್ಟಿದ್ದ. ಹಣ ಸ್ವೀಕರಿಸುತ್ತಿದ್ದ ದೃಶ್ಯವನ್ನು ವ್ಯಕ್ತಿಯ ಕಡೆಯವರು ವೀಡಿಯೋ ಮಾಡಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದರು. ಈ ಕುರಿತು ತಹಶೀಲ್ದಾರ ಮಂಜುನಾಥ ಪಾಂಚಾಳ್,ಇಲಾಖಾ ವಿಚಾರಣೆ ಬಾಕಿ ಉಳಿಸಿ ತಕ್ಷಣಕ್ಕೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಪಬ್ಲಿಕ್ ನೆಕ್ಸ್ಟ್ ನ್ಯೂಸ್ ಜೊತೆ ಮಾತನಾಡಿ ತಿಳಿಸಿದ್ದಾರೆ.
ವರದಿ:ಯೋಹಾನ್ ಪಿ ಹೊನ್ನಡ್ಡಿ ಬೀದರ್
PublicNext
23/01/2025 08:29 pm