ಬೀದರ್: ಪೊಲೀಸರ ಸಮ್ಮುಖದಲ್ಲೇ ಐತಿಹಾಸಿಕ ಮಹಮೂದ್ ಗವಾನ್ ಮದರಸಾ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿದ ದಸರಾ ಮೆರವಣಿಗೆಯಲ್ಲಿದ್ದ ನೂರಾರು ಮಂದಿಯ ಗುಂಪೊಂದು 'ಜೈ ಶ್ರೀ ರಾಮ್' ಘೋಷಣೆ ಕೂಗಿದ್ದಲ್ಲದೆ, ಭದ್ರತಾ ಸಿಬ್ಬಂದಿಗೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.
ಬುಧವಾರ ತಡರಾತ್ರಿ ನೂರಾರು ಮಂದಿಯ ಗುಂಪೊಂದು "ಜೈ ಶ್ರೀ ರಾಮ್" ಎಂದು ಘೋಷಣೆಗಳನ್ನು ಕೂಗಿ ಮಹಮೂದ್ ಗವಾನ್ ಮದರಸಾ ಆವರಣದ ಬೀಗ ಮುರಿದು ಅಕ್ರಮವಾಗಿ ಪ್ರವೇಶಿಸಿದೆ. ಬಳಿಕ ಇಲ್ಲಿನ ಭದ್ರತಾ ಸಿಬ್ಬಂದಿಗೆ ಬೆದರಿಕೆ ಹಾಕಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬೀದರ್ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಗ್ರ ಪ್ರತಿಭಟನೆ ಎಚ್ಚರಿಕೆ: ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಜರುಗಿಸದಿದ್ದರೆ ಇಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ವರದಿ :ಯೋಹನ್ ಪಿ ಹೊನ್ನಡ್ಡಿ ಬೀದರ್ ಜಿಲ್ಲೆ.
PublicNext
07/10/2022 11:06 am