", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/39541620250120051705filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PraveenMetreBidar" }, "editor": { "@type": "Person", "name": "8748919992" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೀದರ್ : ಜನವರಿ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ 17 ಮತ್ತು 18 ವರ್ಷಗಳ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸ...Read more" } ", "keywords": "January 25 is celebrated as National Voters' Day in India. This day is significant as it marks the foundation day of the Election Commission of India (ECI), which was established on January 25, 1950 ¹.,Bidar,Government", "url": "https://publicnext.com/article/nid/Bidar/Government" } ಬೀದರ್ : ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್ : ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನ

ಬೀದರ್ : ಜನವರಿ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ 17 ಮತ್ತು 18 ವರ್ಷಗಳ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನವರಿ.25 ರಂದು ನಗರದ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ Voter APP Helpline ಡೌನಲೋಡ ಮಾಡಿಕೊಂಡು ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸುತ್ತಾ 25 ರಂದು ಸಾರ್ವತ್ರಿಕ ರಜಾ ಇರುವುದರಿಂದ ಜನವರಿ.24 ರಂದು ಶಾಲಾ ಕಾಲೇಜುಗಳಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿ ಜನವರಿ.25 ರಂದು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕೆಂದು ಹೇಳಿದರು.

Edited By : PublicNext Desk
PublicNext

PublicNext

20/01/2025 05:17 pm

Cinque Terre

16.4 K

Cinque Terre

0