ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್ : ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ

ಬೀದರ್ : ಗ್ರಾಮೀಣ ಭಾಗದಲ್ಲಿ ದಶಕಗಳಿಂದ ನನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳ ತಗಾದೆಗೆ ಶಾಶ್ವತ ಪರಿಹಾರ ಒದಗಿಸಲು ‘ಪೋಡಿ ಮುಕ್ತ ಗ್ರಾಮ ಅಭಿಯಾನ’ಕ್ಕೆ ಚಾಲನೆ ನೀಡಲು ಸರ್ವೆ ಹಾಗೂ ಭೂ ದಾಖಲಾತಿ ಇಲಾಖೆ ಮುಂದಾಗಿದೆ ಗ್ರಾಮಸ್ಥರೆಲ್ಲರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಗ್ರಾಮದ ಜನರಿಗೆ ಸಲಹೆ ನೀಡಿದರು.

ಬೀದರ್ ದಕ್ಷಿಣ ಕ್ಷೇತ್ರದ ಔರಾದ್ ಎಸ್ ಗ್ರಾಮದಲ್ಲಿ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಕಂದಾಯ ಇಲಾಖೆ ವತಿಯಿಂದ ನಡೆದ ಫೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಔರಾದ್ (ಎಸ್) ಗ್ರಾಮದಲ್ಲಿ ಪೋಡಿ ಮುಕ್ತ ಗ್ರಾಮ ಯೋಜನೆ ಅಡಿಯಲ್ಲಿ ಆಯ್ದ ಗ್ರಾಮ ಬಹು ಮಾಲೀಕತ್ವದ ಖಾಸಗಿ/ಹಿಡುವಳಿ ಜಮೀನುಗಳನ್ನು ಅಳತೆಗೆ ಒಳಪಡಿಸಿ ಏಕಮಾಲೀಕತ್ವ ಪರಿವರ್ತಿಸುವ ಉದ್ದೇಶದಿಂದ ಕಂದಾಯ ಇಲಾಖೆ ಈ ಯೋಜನೆಯನ್ನು ಆರಂಭಿಸಿದೆ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಹೊಸ ಸ್ವರೂಪ ಮಾಡಲಾಗುವುದು. ಅರ್ಜಿ ಸಲ್ಲಿಸದಿದ್ದರೂ ಗ್ರಾಮದ ಎಲ್ಲ ಆಸ್ತಿಗಳ ಭೂಮಾಪನ ಪೂರ್ಣಗೊಳಿಸಿ, ಪೋಡಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಹೀಗಾಗಿ ಪ್ರತಿಯೊಬ್ಬರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗ್ರಾಮದ ಜನರಿಗೆ ತಿಳಿಸಿದರು.

Edited By : PublicNext Desk
PublicNext

PublicNext

20/01/2025 06:35 pm

Cinque Terre

28.02 K

Cinque Terre

0