ಬೀದರ್: ಒಗ್ಗರಣೆ ಅನ್ನ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಬೀದರ್ ಜಿಲ್ಲೆ ಹುಮನಾಬಾದ್‌ನಲ್ಲಿ ನಡೆದಿದೆ.
ಬಸವತೀರ್ಥ ವಿದ್ಯಾಪೀಠ ಶಾಲೆಯಲ್ಲಿ ಈ ಘಟನೆ ನಡೆದಿದೆ. ಒಗ್ಗರಣೆ ಅನ್ನ ತಿಂದು 50ಕ್ಕೂ ಅಧಿಕ ಮಕ್ಕಳಿಗೆ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿನ್ನೆ ರಾತ್ರಿ ಉಳಿದ ಅನ್ನಕ್ಕೆ ಇಂದು ಒಗ್ಗರಣೆ ನೀಡಿ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹುಮನಾಬಾದ್ ಪಟ್ಟಣದ ಹೊರವಲಯದ ಶಾಲೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಗೆ ಎಂಎಲ್‌ಸಿ ಭೀಮಾರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಯೋಹಾನ್ ಪಿ ಹೊನ್ನಡ್ಡಿ ಬೀದರ್
PublicNext
13/11/2024 01:08 pm