ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ಸಾಮೂಹಿಕ ಆತ್ಮಹತ್ಯೆಗೆ ಮುಂದಾದ ಕಾರಂಜಾ ಸಂತ್ರಸ್ತರು ಪೊಲೀಸರ ವಶಕ್ಕೆ

ಬೀದರ್: ಕಾರಂಜಾ ಜಲಾಶಯದಲ್ಲಿ ಭೂಮಿ ಕಳೆದುಕೊಂಡಿರುವ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂಬುದು ಮೂರು ದಶಕಗಳ ಬೇಡಿಕೆಯಾಗಿದ್ದು, ಕಾರಂಜಾ ಸಂತ್ರಸ್ತರ ಹೋರಾಟ ಸಮಿತಿ ನೇತೃತ್ವದಲ್ಲಿ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಅಹೋರಾತ್ರಿ ಧರಣಿ ಮಾಡಲಾಗುತ್ತಿದೆ.

ಆದರೆ ಸರ್ಕಾರ ಮಾತ್ರ ಕ್ಯಾರೇ ಎಂದಿರಲಿಲ್ಲ. ಡಿಸೆಂಬರ್ 10ರೊಳಗೆ ನ್ಯಾಯ ಸಿಗದಿದ್ದರೆ ಆತ್ಮಹತ್ಯೆಯ ಎಚ್ಚರಿಕೆ ನೀಡಿದ ರೈತರು ಡಿ.11 ರಂದು ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಕಾರಂಜಾ ಸಂತ್ರಸ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಕಾರ ಸ್ಪಂದಿಸದ ಕಾರಣ ನಗರದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬೇಡಿಕೆ ಈಡೇರಿಕೆಗೆ ಸರ್ಕಾರದ ನಿರ್ಲಕ್ಷ್ಯ ಹಿನ್ನೆಲೆ 15 ದಿನಗಳ ಗಡುವು ನೀಡಿದ್ದ ಸಮಿತಿ ವೈಜ್ಞಾನಿಕ ಪರಿಹಾರ ನೀಡದಿದ್ದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆ ನೀಡಿದ್ದರು. ಬುಧವಾರ ಧರಣಿ ಸ್ಥಳದಲ್ಲಿ ಹಗ್ಗವನ್ನು ಕುತ್ತಿಗೆಗೆ ಸುತ್ತಿಕೊಂಡು ಆತ್ಮಹತ್ಯೆ ನಕಲು ಪ್ರದರ್ಶನ ಮಾಡಿ, ಜಿಲ್ಲಾಧಿಕಾರಿ ಕಚೇರಿಗೆ ರ‍್ಯಾಲಿ ಮೂಲಕ ತೆರಳುವ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯೋಹಾನ್ ಪಿ ಹೊನ್ನಡ್ಡಿ, ಪಬ್ಲಿಕ್ ನೆಕ್ಸ್ಟ್, ಬೀದರ್

Edited By : Suman K
Kshetra Samachara

Kshetra Samachara

11/12/2024 07:56 pm

Cinque Terre

3.12 K

Cinque Terre

0