ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ಡಿಟಿಐ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ - 4 ಕೋಟಿ ರೂಪಾಯಿಗೂ ಅಧಿಕ ಅಕ್ರಮ ಆಸ್ತಿ ಪತ್ತೆ

ಬೀದರ್: ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಹನುಮಂತ ನೇತೃತ್ವದಲ್ಲಿ ದಾಳಿ ನಡೆದಿದೆ. ರವೀಂದ್ರ ರೊಟ್ಟೆ ಈ ಹಿಂದೆ ಬೀದರ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿರೆಸ್ತಾದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಅಕ್ರಮವಾಗಿ ಆಸ್ತಿ ಮಾಡಿದ್ದಾರೆ ಎಂಬ ದೂರುಗಳ ಮೇರೆಗೆ ಪೊಲೀಸರ ತಂಡ ಎರಡು ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದು, ಅಂದಾಜು 4 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿರುವುದು ಕಂಡು ಬಂದಿದೆ. ಇನ್ನು ಶೋಧ ಕಾರ್ಯ ಮುಂದುವರೆದಿದೆ ಎಂದು ಕಲಬುರಗಿ ಲೋಕಾಯುಕ್ತ ಎಸ್‌ಪಿ ಉಮೇಶ್ ಬಿ.ಕೆ. ಹೇಳಿದರು.

ರವೀಂದ್ರಕುಮಾರ್ ರೊಟ್ಟಿ ಅವರ ಬೀದರ್ ನಿವಾಸ ಹಾಗೂ ಬೀದರ್‌ನ ನೌಬಾದ್‌ನಲ್ಲಿರುವ ಕಚೇರಿ ಮೇಲೆ ಏಕಕಾಲಕ್ಕೆ ದಾಳಿಯಾಗಿದ್ದು, ಬೀದರ್‌ನ ಗುಂಪಾ ನಿವಾಸದಲ್ಲೂ ದಾಖಲೆಗಳ ಪರಿಶೀಲನೆ ನಡೆದಿದೆ.

ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರಕುಮಾರ್ ರೊಟ್ಟಿ ಇದಕ್ಕೂ ಮೊದಲು ಬೀದರ್ ಡಿಸಿ ಕಚೇರಿಯಲ್ಲಿ ಶಿರಸ್ತೇದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Edited By : Nagesh Gaonkar
PublicNext

PublicNext

12/11/2024 09:49 pm

Cinque Terre

26.72 K

Cinque Terre

0