ಬೀದರ್ : ಬೀದರ್ ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಆರನೇ ಸುತ್ತಿನ ಕಾಲು ಮತ್ತು ಬಾಯಿ ಜ್ವರ ಸಾಮೂಹಿಕ ಲಸಿಕಾ ಕಾರ್ಯಕ್ರಮ ಇಂದಿನಿಂದ ನವೆಂಬರ್ 20ರ ವರೆಗೆ ನಡೆಯಲಿದೆ' ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಕಾಲು ಮತ್ತು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿಯೊಂದು ಗ್ರಾಮದಲ್ಲಿ ಪಶು ವೈದರು ಹಾಗೂ ಸಿಬ್ಬಂದಿ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳಲು ಪ್ರೋತ್ಸಾಹಿಸಿ ಲಸಿಕೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಜಾನುವಾರು ಮಾಲೀಕರು, ಪಶು ವೈದರು ಹಾಗೂ ಸಿಬ್ಬಂದಿ ಮನೆ ಬಾಗಿಲಿಗೆ ಬಂದಾಗ ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ರೈತರಲ್ಲಿ ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಡಾ.ನರಸಪ್ಪ ಎ.ಡಿ., ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿಯ ಸದಸ್ಯರು ಹಾಗೂ ತಾಲ್ಲೂಕಿನ ಎಲ್ಲ ಮುಖ್ಯ ಪಶು ವೈದ್ಯಾಧಿಕಾರಿಗಳು ಪಾಲ್ಗೊಂಡಿದ್ದರು.
Kshetra Samachara
21/10/2024 05:46 pm