ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್ : ಅಪೂರ್ಣ ಕಾಮಗಾರಿ ಬೇಗ ಪೂರ್ಣಗೊಳಿಸಿ - ಶಾಸಕ ಪ್ರಭು ಚವ್ಹಾಣ

ಬೀದರ್ : ಔರಾದ(ಬಿ) ಮತಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಅಪೂರ್ಣವಾಗಿರುವ ಎಲ್ಲ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಅಧಿಕಾರಿಗಳಿಗೆ ತಿಳಿಸಿದರು.

ದಾಬಕಾ ಹೋಬಳಿಯ ಲಿಂಗಿ, ಕಿರಗುಣವಾಡಿ, ಏಕಂಬಾ, ಹುಲ್ಯಾಳ, ಡೊಂಗರಗಾAವ, ಕರಕ್ಯಾಳ, ಹಸ್ಸಿಖೇರಾ, ಖಂಡಿಕೇರಿ, ಜಮಾಲಪೂರನಲ್ಲಿ ಜನೆವರಿ 21ರಂದು ಗ್ರಾಮ ಸಂಚಾರ ನಡೆಸಿ ಅವರು ಮಾತನಾಡಿದರು.

ತಾವು ಭೇಟಿ ನೀಡಿದ ಗ್ರಾಮಗಳಲ್ಲಿ ಜನರ ಸಂಕಷ್ಟಗಳನ್ನು ಆಲಿಸಿದ ಶಾಸಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಲೆಕ್ಕಾಧಿಕಾರಿ, ಕೃಷಿ ಇಲಾಖೆ ಸಿಬ್ಬಂದಿ ಬರುತ್ತಾರೆಯೇ ? ಕುಡಿಯುವ ನೀರು, ವಿದ್ಯುತ್ ಸಮಸ್ಯೆಯ ಬಗ್ಗೆ ಮಾಹಿತಿ ಪಡೆದರು. ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಪ್ಪದೇ ತಮ್ಮ ವ್ಯಾಪ್ತಿಯಲ್ಲಿನ ಗ್ರಾಮಕ್ಕೆ ಭೇಟಿ ನೀಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.

ಕುಡಿಯುವ ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ರಸ್ತೆ, ಸಮುದಾಯ ಭವನಗಳು ಹೀಗ ಹಲವಾರು ರೀತಿಯ ಕಾಮಗಾರಿಗಳು ಚಾಲ್ತಿಯಲ್ಲಿವೆ. ಜನತೆಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಅವುಗಳನ್ನು ಬೇಗ ಪೂರ್ಣಗೊಳಿಸಿ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ಸೂಚಿಸಿದರು.

ಸಾಕಷ್ಟು ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಯಿಂದಲೇ ಆಗಬಹುದಾದ ಸಣ್ಣ-ಪುಟ್ಟ ಸಮಸ್ಯೆಗಳನ್ನು ನಿವಾರಿಸಿದರೆ ಜನತೆ ನೆಮ್ಮದಿಯಿಂದ ಇರುತ್ತಾರೆ. ಹೊಲಗಳಿಗೆ ಹೋಗುವ ರಸ್ತೆಗಳು, ಸಿಸಿ ರಸ್ತೆ, ಚರಂಡಿ, ಸ್ವಚ್ಛತೆಯಂತಹ ಕೆಲಸಗಳನ್ನು ಮಾಡಿಕೊಡಬೇಕು. ಬೀದಿ ದೀಪಗಳು ಸರಿಯಾಗಿ ನಿರ್ವಹಿಸಬೇಕು. ಕಂದಾಯ ಇಲಾಖೆಯ ಸಹಯೋಗದೊಂದಿಗೆ ಸ್ಮಶಾನ ಭೂಮಿ ಸಮಸ್ಯೆ ಪರಿಹರಿಸಲು ಒತ್ತು ಕೊಡಬೇಕು. ಸೂರು ರಹಿತ ಬಡವರಿಗೆ ಮನೆಗಳನ್ನು ಕಟ್ಟಿಸಿಕೊಡಲು ಹಿಂದೆ ಕ್ಷೇತ್ರಕ್ಕೆ ಹೆಚ್ಚುವರಿ ಮನೆಗಳನ್ನು ಮಂಜೂರು ಮಾಡಿಸಿದ್ದೆ. ಜನತೆ ಅಡೆತಡೆಗಳಿಲ್ಲದೇ ಮನೆ ನಿರ್ಮಿಸಿಕೊಳ್ಳಲು ಅನುಕೂಲ ಮಾಡಿಕೊಡಬೇಕು ಎಂದು ನಿರ್ದೇಶನ ನೀಡಿದರು

Edited By : PublicNext Desk
Kshetra Samachara

Kshetra Samachara

21/01/2025 06:01 pm

Cinque Terre

1.3 K

Cinque Terre

0