ವಿಜಯಪುರ: ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರಕಿತು.
ಪಟ್ಟಣದ ಪ್ರವಾಸಿ ಮಂದಿರದಿಂದ ಸಮ್ಮೇಳನ ಸರ್ವಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು ಸಕಲ ವಾಧ್ಯ ವೈಭವಗಳೊಂದಿಗೆ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವೇದಿಕೆ ತಲುಪಿತು. ಮೆರವಣಿಗೆಯಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳ ಸ್ಥಬ್ದಚಿತ್ರ ಗಮನ ಸೆಳೆದವು. ಮೆರವಣಿಗೆಯಲ್ಲಿ ವಿವಿಧ ಪಕ್ಷದ ಮುಖಂಡರು ವಿವಿಧ ಇಲಾಖೆಯ ಅಧಿಕಾರಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ವಿವಿಧ ಕನ್ನಡಪರ ಸಂಘಟನೆಯ ಮುಖಂಡರು ಕನ್ನಡ ಹಾಡಿಗೆ ಕುಣಿದು ಕುಪ್ಪಳಿಸುವ ಮೂಲಕ ಸಂಭ್ರಮಿಸಿದರು.
Kshetra Samachara
01/10/2024 11:56 am