ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾರ್ಯಾಲಯ ಉದ್ಘಾಟಿಸಿದ ಸಚಿವ ಶಿವಾನಂದ ಪಾಟೀಲ

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಸಚಿವ ಶಿವಾನಂದ ಪಾಟೀಲ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಕಾರ್ಯಾಲಯವನ್ನು ಉದ್ಘಾಟಿಸಿದರು.

ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದುರ್ ಶಾಸ್ತ್ರಿ ಅವರ ಫೋಟೋ ಇಲ್ಲದಿರುವುದನ್ನು ಗಮನಿಸಿದ ಸಚಿವರು ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಫೋಟೋ ಇಡುವಂತೆ ಇಒ ಪ್ರಕಾಶ ದೇಸಾಯಿ ಅವರಿಗೆ ಸೂಚನೆ ನೀಡಿದರು. ನಂತರ ತಾಲೂಕು ಪಂಚಾಯತಿ ಸಿಬ್ಬಂದಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಫೋಟೋ ಇಟ್ಟರು.

ಕಾರ್ಯಾಲಯ ಉದ್ಘಾಟನೆಗೂ ಮುನ್ನ ತಾಲೂಕು ಪಂಚಾಯತಿ ಆವರಣದಲ್ಲಿ ಸಸಿ ನಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯ ತಾಲೂಕ ಅಧ್ಯಕ್ಷ ಮೈಬೂಬಸಾಬ ನಾಯ್ಕೋಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ ಚಂದ್ರಶೇಖರಗೌಡ ಪಾಟೀಲ, ಶಂಕರಗೌಡ ಬಿರಾದಾರ ಸೇರಿದಂತೆ ಮುಂತಾದವರು ಇದ್ದರು.

Edited By : Ashok M
PublicNext

PublicNext

02/10/2024 08:44 pm

Cinque Terre

27.79 K

Cinque Terre

0