ನವದೆಹಲಿ: ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (ಎಫ್‍ಎಒ) 75ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 75 ರೂ. ಮುಖ ಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. ಜೊತೆಗೆ ಅಭಿವೃದ್ಧಿ ಪಡಿಸಿದ 17 ಹೊಸ ಜೈವಿಕ ಬಲವರ್ಧಿತ ಬೆಳೆಗಳನ್ನು ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ನೀಡಿ ಖರೀದಿಸುವ ಬಗ್ಗೆ ಸರ್ಕಾರದ ಬದ್ಧವಾಗಿದೆ. ಎಂಎಸ್‌ಪಿ ಮತ್ತು ಸರ್ಕಾರದ ಸಂಗ್ರಹಣೆ ದೇಶದ ಆಹಾರ ಸುರಕ್ಷತೆಯ ಪ್ರಮುಖ ಭಾಗವಾಗಿದೆ. ಆದರೆ ಇದನ್ನು ಉತ್ತಮ ಸೌಲಭ್ಯಗಳೊಂದಿಗೆ ಮತ್ತು ವೈಜ್ಞಾನಿಕ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಮುಂದುವರಿಸುವುದು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.
PublicNext
16/10/2020 05:54 pm