ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಬ್ಬದ ಸಂದರ್ಭದಲ್ಲಿ KSRTC ಪ್ರಯಾಣಿಕರಿಗೆ ಸಿಹಿ ಸುದ್ದಿ

ಬೆಂಗಳೂರು: ಕೊರೊನಾದಿಂದ ಜನರ ಓಡಾಟವಿಲ್ಲದೆ ಬಸ್ ಗಳ ಸಂಚಾರ ಕಡಿಮೆಯಾಗಿತ್ತು.

ಸಧ್ಯ ಎಲ್ಲವೂ ಸಹಜ ಸ್ಥಿಗೆ ಬರುತ್ತಿದೆ. ಇದರ ಬೆನ್ನಲ್ಲೇ ಇದೀಗ ಕೆಎಸ್ ಆರ್ ಟಿಸಿ ವಾರಾಂತ್ಯ ದಿನಗಳಂದು ಪ್ರತಿಷ್ಠಿತ ಸಾರಿಗೆಗಳಲ್ಲಿ ಶೇ.10ರಷ್ಟು ವಿಧಿಸಲಾಗುತ್ತಿದ್ದ ಹೆಚ್ಚುವರಿ ಪ್ರಯಾಣದ ದರವನ್ನು ರದ್ದುಪಡಿಸಿದೆ.

ಈ ಬಗ್ಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರ ಬರೆದಿದ್ದಾರೆ.

ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಪ್ರತಿಷ್ಠಿತ ಹವಾನಿಯಂತ್ರಿತ ಸಾರಿಗೆಗಳಲ್ಲಿ ಪ್ರಯಾಣಿಸಲು ಸಾರ್ವಜನಿಕರು ಆಸಕ್ತಿಯನ್ನು ತೋರುತ್ತಿಲ್ಲ.

ಖಾಸಗಿ ಬಸ್ ಮತ್ತು ಪ್ರತಿಷ್ಠಿತ ಸಾರಿಗೆಗಳಲ್ಲಿನ ಪ್ರಯಾಣದರ ನಿಗಮದ ಸಾರಿಗೆಗಳಲ್ಲಿ ನಿಗದಿಪಡಿಸಿದ ಪ್ರಯಾಣದರಕ್ಕಿಂತ ಕಡಿಮೆಯಿದ್ದು, ಪ್ರಯಾಣಿಕರನ್ನು ನಿಗಮದ ಸಾರಿಗೆಗಳತ್ತ ಆಕರ್ಷಿಸುವ ದೃಷ್ಟಿಯಿಂದ ಪ್ರತಿಷ್ಠಿತ ಸಾರಿಗೆಗಳಲ್ಲಿ ವಾರಾಂತ್ಯ ದಿನಗಳಂದು ಶೇ.10 ರಷ್ಟು ಪ್ರಯಾಣದರವನ್ನು ಹೆಚ್ಚಿಸಿ ಪ್ರಯಾಣದರ ವಿಧಿಸುತ್ತಿರುವುದನ್ನು ಡಿಸೆಂಬರ್ 20 ರವರೆಗೆ ಹಿಂಪಡೆಯುವುದು ಸೂಕ್ತವೆಂದು ಭಾವಿಸಿ ನಿಗಮ ಈ ಆದೇಶವನ್ನು ಹೊರಡಿಸಿದೆ.

ಅಕ್ಟೋಬರ್ 10 ರಿಂದ ಡಿಸೆಂಬರ್ 31ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Edited By : Nirmala Aralikatti
PublicNext

PublicNext

19/10/2020 12:01 pm

Cinque Terre

45.02 K

Cinque Terre

1

ಸಂಬಂಧಿತ ಸುದ್ದಿ