ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಗಿಫ್ಟ್ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಕೇಂದ್ರ ಸರ್ಕಾರಿ ನೌಕರರಿಗೆ 2019-2020ರ ಬೋನಸ್ ನೀಡುವುದಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ. ಕನಿಷ್ಠ 30 ಲಕ್ಷ ಗೆಜೆಟೆಡ್ ಅಲ್ಲದ ನೌಕರರು ಇದರಿಂದ ಪ್ರಯೋಜನ ಪಡೆಯುತ್ತಾರೆ ಎಂದು ತಿಳಿಸಿದ್ದಾರೆ.
ವಿಜಯದಶಮಿಗೂ ಮುಂಚಿತವಾಗಿ ನೇರ ಲಾಭ ವರ್ಗಾವಣೆಯ ಮೂಲಕ ಬೋನಸ್ ಅನ್ನು ಒಂದೇ ಕಂತಿನಲ್ಲಿ ನೀಡಲಾಗುವುದು. ಇದರಿಂದ ಸರ್ಕಾರಕ್ಕೆ ಒಟ್ಟು 3,737 ಕೋಟಿ ರೂ. ವೆಚ್ಚವಾಗಲಿದ್ದು, 3.67 ಕೋಟಿ ಗೆಜೆಟೆಡ್ ಅಲ್ಲದ ಉದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
PublicNext
21/10/2020 06:12 pm