ಕೋಲ್ಕತ್ತಾ: ಮುಂಬೈ–ದುರ್ಗಾಪುರ ನಡುವಣ, ಸ್ಪೈಸ್‌ಜೆಟ್ ಸಂಸ್ಥೆಯ ಬೋಯಿಂಗ್ ಬಿ737 ವಿಮಾನ ಲ್ಯಾಂಡ್ ಆಗುವ ವೇಳೆ ಕಂಡುಬಂದ ತಾಂತ್ರಿಕದೋಷದಿಂದ ಉಂಟಾದ ಒತ್ತಡದಿಂದ 14 ಮಂದಿಗೆ ಗಂಭೀರ ಗಾಯಗಳಾಗಿವೆ.
ಭಾನುವಾರ ರಾತ್ರಿ ವಾಯು ಪ್ರದೇಶದ ಬಿರುಗಾಳಿ ಹಿನ್ನೆಲೆಯಲ್ಲಿ ಸ್ಪೈಸ್‌ಜೆಟ್‌ನ ಎಸ್‌ಜಿ-945 ವಿಮಾನ ಪಶ್ಚಿಮ ಬಂಗಾಳದ ದುರ್ಗಾಪುರದ ಕಾಜಿ ನಜ್ರುಲ್ ಇಸ್ಲಾಂ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ. ಲಗೇಜ್ ಬ್ಯಾಗ್‌ಗಳು ಪ್ರಯಾಣಿಕರ ತಲೆ ಮೇಲೆ ಬಿದ್ದಿರುವ ಪರಿಣಾಮ ಅನೇಕರ ತಲೆಗೆ ಗಾಯಗಳಾಗಿವೆ.
ಗಾಯಗೊಂಡಿರುವ 40 ಪ್ರಯಾಣಿಕರಲ್ಲಿ 14 ಮಂದಿಗೆ ಗಂಭೀರ ಗಾಯಗಳಾಗಿವೆ. ಉಳಿದವರು ಸಣ್ಣ ಪುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗಂಭೀರ ಗಾಯಗಳಾದವರಲ್ಲಿ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
PublicNext
02/05/2022 11:53 am