ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾವಿ ಸೊಸೆಯ ಮೊದಲ ಭರತನಾಟ್ಯ ಪ್ರದರ್ಶನಕ್ಕೆ ಸಾಕ್ಷಿಯಾದ ಅಂಬಾನಿ ದಂಪತಿ

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಅಂಬಾನಿ ಮುಂಬೈನ ಜಿಯೋ ವರ್ಲ್ಡ್ ಸೆಂಟರ್ನಲ್ಲಿ ತಮ್ಮ ಭಾವಿ ಸೊಸೆ ರಾಧಿಕಾ ಮರ್ಚೆಂಟ್ ಅವರ ಆರಂಗೇಟ್ರಂ ಸಮಾರಂಭವನ್ನು ಆಯೋಜಿಸಿದ್ದಾರೆ.

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ಅಂಬಾನಿ ಕುಟುಂಬದ ಭಾವಿ ಸೊಸೆ ರಾಧಿಕಾ ಅವರ ನೃತ್ಯ ಪ್ರದರ್ಶನ ಯಶಸ್ವಿಯಾಗಿ ನಡೆಯಿತು. ಸಾಂಪ್ರದಾಯಿಕ ಉಡುಗೆಯಲ್ಲಿ ಪಾಲ್ಗೊಂಡಿದ್ದ ಗಣ್ಯರು ರಾಧಿಕಾ ಭರತನಾಟ್ಯ ಪ್ರದರ್ಶನಕ್ಕೆ ಮನಸೋತರು.

ಖ್ಯಾತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ದಂಪತಿಯ ಎರಡನೇ ಪುತ್ರ ಅನಂತ್ ಅಂಬಾನಿ ಅವರಿಗೆ ನಿಶ್ಚಿತವಾಗಿರುವ ವಧು ರಾಧಿಕಾ ಮರ್ಚೆಂಟ್ ಭರತನಾಟ್ಯ ರಂಗಪ್ರವೇಶಕ್ಕೆ ಪದಾರ್ಪಣೆ ಮಾಡಿದ್ದಾರೆ. ಮುಂಬೈನ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆದ ಭರತನಾಟ್ಯ ಪ್ರದರ್ಶನದಲ್ಲಿ ಅಂಬಾನಿ, ಮರ್ಚೆಂಟ್ ಅವರ ಕುಟುಂಬ ಸದಸ್ಯರು ಮತ್ತು ಅನೇಕ ಚಲನಚಿತ್ರ, ರಾಜಕೀಯ ಮತ್ತು ವ್ಯಾಪಾರ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು.

Edited By : Vijay Kumar
PublicNext

PublicNext

06/06/2022 11:14 am

Cinque Terre

66.55 K

Cinque Terre

0

ಸಂಬಂಧಿತ ಸುದ್ದಿ