ಮುಂಬೈ: ದೇಶದ ಅಟೋಮೊಬೈಲ್ ಉದ್ಯಮದ ಉತ್ತೇಜನಕ್ಕೆ ಕೇಂದ್ರ ಸರ್ಕಾರವು ‘ಗುಜುರಿ ನೀತಿ'ಯನ್ನು ಜಾರಿಗೆ ತರಲು ಒಂದು ಹೆಜ್ಜೆ ಮುಂದಿಟ್ಟಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 'ಸ್ಕ್ರಾಪ್ ನಿಯಮ'ವನ್ನು ಪ್ರಸ್ತಾಪಿಸಿದ್ದಾರೆ. ಈ ಮೂಲಕ 20 ವರ್ಷಗಳಷ್ಟು ಹಳೆಯ ಖಾಸಗಿ ವಾಹನ ಹಾಗೂ 15 ವರ್ಷ ಮೇಲ್ಪಟ್ಟ ಕಮರ್ಷಿಯಲ್ ವಾಹನಗಳು ಫಿಟ್ನೆಸ್ ಟೆಸ್ಟ್‌ಗೆ ಒಳಗಾಗಬೇಕು ಎಂದು ತಿಳಿಸಿದ್ದಾರೆ.
ಮಾಲಿನ್ಯ ನಿಯಂತ್ರಣ ಹಾಗೂ ಆಟೋಮೊಬೈಲ್ ಕ್ಷೇತ್ರಕ್ಕೆ ಉತ್ತೇಜನ ನೀಡಲು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಸ್ಕ್ರಾಪ್ ಪಾಲಿಸಿ (ಗುಜುರಿ ನಿಯಮ) ಜಾರಿಗೆ ತರಲು ಮುಂದಾಗಿದ್ದಾರೆ. ಹಳೆಯ ವಾಹನಗಳನ್ನು ಗುಜುರಿಗೆ ಹಾಕಿದರೆ ಅದಕ್ಕೆ ಹಣಕಾಸಿನ ಸಹಾಯದ ಜೊತೆಗೆ ಹೊಸ ವಾಹನದ ಖರೀದಿಗೆ ಉತ್ತೇಜನ ನೀಡುವುದು ಈ ನೀತಿಯ ಮುಖ್ಯ ಉದ್ದೇಶ. ಕಳೆದ ಎರಡು ವರ್ಷದಿಂದ ಅಟೋಮೊಬೈಲ್ ಕ್ಷೇತ್ರದ ಬೆಳವಣಿಗೆ ಕಡಿಮೆಯಾಗುತ್ತಿದೆ. ಹೀಗಾಗಿ ವಿದೇಶಗಳಲ್ಲಿ ಇರುವಂತೆ ಭಾರತದಲ್ಲೂ ಗುಜುರಿ ನೀತಿ ಜಾರಿ ಮಾಡುವಂತೆ ವಾಹನ ತಯಾರಕ ಕಂಪನಿಗಳು ಸರ್ಕಾರವನ್ನು ಒತ್ತಾಯಿಸಿದ್ದವು.
PublicNext
01/02/2021 12:31 pm