ನವದೆಹಲಿ: ಟಾಟಾ ಗ್ರೂಪ್ ಗೌರವಾಧ್ಯಕ್ಷ ರತನ್ ಟಾಟಾ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡುವಂತೆ ಅಭಿಯಾನ ಶುರುವಾಗಿದೆ. ಈ ವಿಚಾರವಾಗಿ ಸ್ವತಃ ಪ್ರತಿಕ್ರಿಯೆ ನೀಡಿರುವ ರತನ್ ಟಾಟಾ ಅವರು ಅಭಿಯಾನ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಟ್ವೀಟ್ ಮಾಡಿರುವ ಅವರು, "ಪ್ರಶಸ್ತಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಒಂದು ವರ್ಗವು ವ್ಯಕ್ತಪಡಿಸಿದ ಭಾವನೆಗಳನ್ನು ನಾನು ಪ್ರಶಂಸಿಸುತ್ತೇನೆ. ಹೀಗಿದ್ದೂ ಇಂತಹ ಅಭಿಯಾನಗಳನ್ನು ನಿಲ್ಲಿಸಬೇಕೆಂದು ವಿನಮ್ರವಾಗಿ ವಿನಂತಿಸುತ್ತೇನೆ. ನಾನು ಭಾರತೀಯನಾಗಿದ್ದು, ಭಾರತದ ಬೆಳವಣಿಗೆ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ಸಾಧ್ಯವಾಗಿದ್ದು ನನ್ನ ಅದೃಷ್ಟ ಎಂದು ನಾನು ಅಂದುಕೊಂಡಿದ್ದೇನೆ" ಎಂದು ತಿಳಿಸಿದ್ದಾರೆ.
ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ #BharatRatnaForRatanTata (ರತನ್ ಟಾಟಾಗೆ ಭಾರತ ರತ್ನ) ಹ್ಯಾಷ್ ಟ್ಯಾಗ್ ಶುಕ್ರವಾರ ಟ್ರೆಂಡ್ ಆಗಿತ್ತು. ಶನಿವಾರವೂ ಟ್ರೆಂಡ್ ಮುಂದುವರಿದಿದ್ದು ಲಕ್ಷಾಂತರ ಜನರು ಟಾಟಾ ಮುಖ್ಯಸ್ಥರಿಗೆ ಭಾರತದ ಅತ್ಯುನ್ನತ ಪ್ರಶಸ್ತಿ ಭಾರತ ರತ್ನ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
PublicNext
06/02/2021 02:32 pm