ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಟೆಸ್ಲಾ ಕಾರು ಉತ್ಪಾದನೆಗೆ ಸಿಎಂ ಗ್ರೀನ್ ಸಿಗ್ನಲ್

ಬೆಂಗಳೂರು: ಅಮೆರಿಕ ಮೂಲದ ಐಷಾರಾಮಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನಾ ಕಂಪನಿಯಾಗಿರುವ ಟೆಸ್ಲಾ ರಾಜ್ಯಕ್ಕೆ ಪ್ರವೇಶಿಸುತ್ತಿದೆ.

ಅತ್ಯಾಧುನಿಕ ಆವಿಷ್ಕಾರಗಳೊಂದಿಗೆ ವಿದ್ಯುತ್ ಕಾರುಗಳ ಉತ್ಪಾದನೆ ಮೂಲಕ ವಿಶ್ವದ ಗಮನ ಸೆಳೆದಿರುವ, ಉದ್ಯಮಿ ಎಲಾನ್ ಮಸ್ಕ್ ಮಾಲೀಕತ್ವದ ಟೆಸ್ಲಾ ಕಂಪನಿ ಕರ್ನಾಟಕದಲ್ಲಿ ಉತ್ಪಾದನಾ ಘಟಕವನ್ನು ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದಾರೆ.

ಕೇಂದ್ರ ಬಜೆಟ್ ಅನ್ನು ಸ್ವಾಗತಿಸುವ ಕುರಿತು ಯಡಿಯೂರಪ್ಪ ಅವರು ಪ್ರಕಟಣೆ ಬಿಡುಗಡೆ ಮಾಡಿದ್ದು, ಅದರಲ್ಲಿ ಈ ಬಗ್ಗೆ ಪ್ರಸ್ತಾಪವಿದೆ.

ಟೆಸ್ಲಾ ಕಂಪನಿಯನ್ನು ಸೆಳೆಯಲು ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ, ತಮಿಳುನಾಡು ಕೂಡ ಪ್ರಯತ್ನಿಸಿದ್ದವು. ಆದರೆ ಆ ಕಂಪನಿ ಕರ್ನಾಟಕವನ್ನು ಆಯ್ಕೆ ಮಾಡಿಕೊಂಡಿದೆ.

ಅತ್ಯಾಧುನಿಕ, ಐಷಾರಾಮಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಇದು ಜಗತ್ತಿನಲ್ಲೇ ಮುಂಚೂಣಿ ಕಂಪನಿ. ಈ ಕಾರ್ ಒಮ್ಮೆ ಚಾರ್ಜ್ ಮಾಡಿದರೆ 500 ಕಿ.ಮೀ ದೂರ ಸಾಗಬಲ್ಲವು. ದರ 55-60 ಲಕ್ಷ ರು. ಇರಲಿದೆ. ಎಲಾನ್ ಮಸ್ಕ್ ಹಾಲಿ ವಿಶ್ವದ ನಂ.1 ಶ್ರೀಮಂತ ಎಂಬ ಹಿರಿಮೆ ಕೂಡ ಹೊಂದಿದ್ದಾರೆ.

Edited By : Nirmala Aralikatti
PublicNext

PublicNext

14/02/2021 09:19 am

Cinque Terre

62.59 K

Cinque Terre

4