ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪ್ರಕಾರ ರಾಜ್ಯದಲ್ಲಿ ಲಿ.ಪೆಟ್ರೋಲ್ ಗೆ 100.63. ಡಿಸೇಲ್ ಗೆ 85.03 ರೂ ನಿಗದಿಯಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 7 ರೂಪಾಯಿ ಇಳಿಕೆ ಮಾಡಿ ಕರ್ನಾಟಕ ಸರ್ಕಾರವು ಗುರುವಾರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ ರೂ 10 ಹಾಗೂ ರೂ 5 ಕ್ಕೆ ಇಳಿಸಿದ ಬೆನ್ನಲ್ಲೇ ಸರ್ಕಾರ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರವು ಕಡಿತಗೊಳಿಸಿರುವ ಅಬಕಾರಿ ತೆರಿಗೆಯ ಜೊತೆಯಲ್ಲಿ ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು 35% ರಿಂದ 25.9%ಕ್ಕೆ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 24% ರಿಂದ 14.34%ಕ್ಕೆ ಇಳಿಸಿರುತ್ತದೆ. ಇದರಿಂದ ಪೆಟ್ರೋಲ್ ದರ ಲಿ. ರೂ. 113.93 ರಿಂದ ರೂ 100.63 ಕ್ಕೆ ಬರಲಿದ್ದು, ಒಟ್ಟಾರೆ ರೂ.13.30 ದರ ಕಡಿತವಾಗಿದೆ..
ಡಿಸೇಲ್ 104.50 ರಿಂದ ರೂಪಾಯಿ 85.03 ಕ್ಕೆ ಬರಲಿದ್ದು, ಒಟ್ಟಾರೆ ದರ ಕಡಿತ ರೂ. 19.47 ಆಗಿದೆ.
PublicNext
04/11/2021 04:44 pm