ಬೆಂಗಳೂರು: ಕೊರೊನಾ ಹರಡುವಿಕೆ ಪ್ರಮಾಣ ಕಡಿಮೆಯಾಗುತ್ತ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಐಟಿ-ಬಿಟಿ ಕ್ಷೇತ್ರದಲ್ಲಿ ವರ್ಕ್ ಫ್ರಂ ಹೋಂ ಅವಕಾಶವನ್ನು ಹಿಂಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ಐಟಿ-ಬಿಟಿ ಕಚೇರಿಗಳಲ್ಲಿ ಶೇ.100ರಷ್ಟು ಸಿಬ್ಬಂದಿ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬಹುದಾಗಿದೆ. ಬಿಬಿಎಂಪಿ ಈ ಆದೇಶ ನೀಡಿದೆ.
ಈ ಮೊದಲು ಕೊರೋನಾ ಸೋಂಕಿನ ಪ್ರಕರಣದ ಹೆಚ್ಚಳದಿಂದಾಗಿ ಐಟಿ-ಬಿಟಿಗಳಿಗೆ ಶೇ.50ರಷ್ಟು ಸಿಬ್ಬಂದಿಗೆ ಮಾತ್ರ ಕೆಲಸ ನಿರ್ವಹಿಸಲು ಅವಕಾಶ ನೀಡಲಾಗಿತ್ತು. ಕೊರೋನಾ ಪ್ರಕರಣಗಳು ಕಡಿಮೆಗೊಂಡ ಹಿನ್ನಲೆಯಲ್ಲಿ, ಇದೀಗ ಬಿಬಿಎಂಪಿ ಈ ಆದೇಶವನ್ನು ಹಿಂಪಡೆದಿದೆ. ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾದ ಕಾರಣ ತಾಂತ್ರಿಕ ಸಲಹಾ ಸಮಿತಿ ಅನುಮತಿ ಮೇರೆಗೆ ಕೋವಿಡ್ ಮಾರ್ಗಸೂಚಿಗಳನ್ನ ಕೈಗೊಂಡು ಶೇ.100ರಷ್ಟು ಸಿಬ್ಬಂದಿಗಳ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಸೂಚಿಸಿದೆ.
PublicNext
06/11/2021 07:41 am