ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರಕಾರಿ ಶಾಲಾ ಮಕ್ಕಳಿಗೆ ಓನ್ ಕ್ಲಾಸ್ ಒನ್ ಟಿವಿ : ವಿತ್ತ ಸಚಿವೆ ನಿರ್ಮಲಾ

ನವದೆಹಲಿ : ಕೇಂದ್ರ ಬಜೆಟ್ ಮುಂದಿನ 25 ವರ್ಷಗಳ ‘ಅಮೃತ್ ಕಲ್’ಮೇಲೆ ಅಡಿಪಾಯ ಹಾಕಲು ಮತ್ತು ಆರ್ಥಿಕತೆಯ ನೀಲನಕ್ಷೆಯನ್ನು ನೀಡಲು ಪ್ರಯತ್ನಿಸುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಹೇಳಿದರು.

ಪ್ರಸಕ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 9.2% ಎಂದು ಅಂದಾಜಿಸಲಾಗಿದೆ.

ಮುಂದಿನ ಮೂರು ವರ್ಷಗಳಲ್ಲಿ 400 ಹೊಸ ವಂದೇ ಭಾರತ್ ರೈಲುಗಳನ್ನು ಸಿದ್ಧಪಡಿಸಲಾಗುವುದು ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. ಇದರೊಂದಿಗೆ ಮುಂದಿನ ಮೂರು ವರ್ಷಗಳಲ್ಲಿ 100 PM ಗತಿ ಶಕ್ತಿ ಕಾರ್ಗೋ ಟರ್ಮಿನಲ್ಗಳನ್ನು ನಿರ್ಮಿಸಲಾಗುವುದು.

ಆನ್ ಲೈನ್ ಶಿಕ್ಷಣ ಮತ್ತಷ್ಟು ಸರಳೀಕರಣಗೊಳಿಸಲು ಸಕಲ ಸಿದ್ಥತೆ ಮಾಡಲಾಗಿದೆ. ಪಿಎಂ ಇ-ವಿದ್ಯಾ ಯೋಜನೆಯ ವಿಸ್ತರಣೆ ಮಾಡುವ ಮೂಲಕ ಡಿಜಿಟಲ್ ಶಿಕ್ಷಕರನ್ನು ಬಳಸಿಕೊಂಡು, ತಂತ್ರಜ್ಞಾನ ಬಳಕೆಯಿಂದ, ಡಿಜಿಟಲ್ ಟೂಲ್ಸ್ ಬಳಕೆಯಿಂದ ಮಕ್ಕಳಿಗೆ ಅರ್ಥವಾಗುವಂತೆ ಪಾಠ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ.

ಸರಕಾರಿ ಶಾಲಾ ಮಕ್ಕಳಿಗೆ ಓನ್ ಕ್ಲಾಸ್ ಒನ್ ಟಿವಿ ಕಾರ್ಯಕ್ರಮದ ಮೂಲಕ ಸರಕಾರಿ ಶಾಲಾ ಮಕ್ಕಳಿಗೆ ಆಯಾ ರಾಜ್ಯಗಳ ಭಾಷೆಯಲ್ಲಿ ಅರ್ಥವಾಗುವಂತೆ ಶಿಕ್ಷಣ ನೀಡಲು ಅಗತ್ಯ ಕ್ರಮ.

ಕೋವಿಡ್ ಸಾಂಕ್ರಾಮಿಕದಿಂದಾಗಿ ಗ್ರಾಮೀಣ ಪ್ರದೇಶಗಳ ಮಕ್ಕಳ ಶಿಕ್ಷಣಕ್ಕೆ ತೊಡಕಾಗಿರುವುದಕ್ಕೆ ‘ವನ್ ಕ್ಲಾಸ್ ವನ್ ಟಿವಿ’ ಆರಂಭಿಸಲಾಗುವುದು. ಪ್ರಧಾನಿ ‘ಇ-ವಿದ್ಯಾ’ ಯೋಜನೆ ಅಡಿಯಲ್ಲಿ 200 ಚಾನೆಲ್​ಗಳು ಅಸ್ತಿತ್ವಕ್ಕೆ ಬರಲಿವೆ ಎಂದು ಸಚಿವೆ ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

01/02/2022 11:31 am

Cinque Terre

115.69 K

Cinque Terre

1

ಸಂಬಂಧಿತ ಸುದ್ದಿ