ನವದೆಹಲಿ: ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿಮತ್ತೊಮ್ಮೆ ಸೋಲಾರ್ ವಿದ್ಯುತ್ ಕ್ಷೇತ್ರದ ಬಲವರ್ಧನೆಗೆ ಒತ್ತು ನೀಡಿದೆ. ಈ ಕ್ಷೇತ್ರಕ್ಕೆ 19,500 ಕೋಟಿ ಅನುದಾನ ನೀಡಲಾಗಿದೆ ಎಂದು ಮುಂಗಡ ಪತ್ರದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಸರ್ಕಾರ ಒತ್ತು ನೀಡಲಿದೆ. ಡಿಆರ್‌ಡಿಒ ಸಹಯೋಗದಲ್ಲಿ ಸಂಶೋಧನೆಗಳನ್ನು ನಡೆಸಲು ಆಸಕ್ತರಿಗೆ ಅವಕಾಶ ನೀಡಲಾಗುವುದು. ಭದ್ರತೆಗೆ ಅಗತ್ಯವಿರುವ ಯುದ್ಧೋಪಕರಣಗಳೂ ಸೇರಿದಂತೆ ಎಲ್ಲ ಬಗೆಯ ಆಯುಧಗಳ ದೇಶೀ ಉತ್ಪಾದನೆಗೆ ಹೆಚ್ಚು ಒತ್ತು ನೀಡಲಾಗುವುದು. ಅಗತ್ಯ ಅನುಕೂಲಗಳನ್ನೂ ಕಲ್ಪಿಸಲಾಗುವುದು. ದೇಶೀ ಕೈಗಾರಿಕೆಗಳಿಗೆ ಬಜೆಟ್‌ನಲಲ್ಲಿ ಮತ್ತಷ್ಟು ಅವಕಾಶ ನೀಡಲಾಗಿದೆ.
PublicNext
01/02/2022 12:13 pm