ನವದೆಹಲಿ: ಪಂಚ ರಾಜ್ಯ ಚುನಾವಣೆ ಹಿನ್ನಲೆಯಲ್ಲಿ ಸ್ಥಿರತೆ ಕಂಡಿದ್ದ ಪೆಟ್ರೋಲ್, ಡಿಸೇಲ್ ದರ ಈಗ ದಾಖಲೆ ಏರಿಕೆ ಕಾಣುತ್ತಿದೆ.
ಹೌದು. ಕಳೆದ 9 ದಿನಗಳಲ್ಲಿ 8ನೇ ಬಾರಿ ಪೆಟ್ರೋಲ್, ಡಿಸೇಲ್ ದರವು ಏರಿಕೆಯಾಗಿದ್ದು, ಇಂದು (ಬುಧವಾರವೂ) ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್‍ಗೆ 80 ಪೈಸೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಒಂದೇ ವಾರದಲ್ಲಿ ಲೀಟರ್‌ಗೆ 5.60ರೂ. ಏರಿಕೆಯಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ 105.62 ರೂ. ಇದ್ದ ಪೆಟ್ರೋಲ್ ದರ 106.46 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 89.70 ರೂ. ಇದ್ದ ಡೀಸೆಲ್ ದರ ರೂ. 90.49ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ. 101.01 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ರೂ.92.27 ದಾಖಲಾಗಿದೆ.
ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯಲ್ಲಿ 85 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀ. ಪೆಟ್ರೋಲ್ ದರ ರೂ. 115.88, ಡೀಸೆಲ್ ರೂ.100.10 ದಾಖಲಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 106.69 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.76 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್‌ಗೆ ಪೆಟ್ರೋಲ್ ಬೆಲೆ 110.52ರೂ ಹಾಗೂ ಡೀಸೆಲ್‍ಗೆ 95.82ರೂ. ದಾಖಲಾಗಿದೆ.
PublicNext
30/03/2022 08:44 am