ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದ 173 ಉಷ್ಣ ವಿದ್ಯುತ್ ಸ್ಥಾವರಗಳ ಪೈಕಿ 106 ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ.!

ನವದೆಹಲಿ: ದೇಶದಲ್ಲಿ ಈಗ ಎದುರಾಗಿರುವ ಕಲ್ಲಿದ್ದಲು ಕೊರತೆ ವಿದ್ಯುತ್‌, ರೈಲು ಸಂಚಾರದ ಮೇಲೆ ಭಾರಿ ಹೊಡೆತ ನೀಡಿದೆ. ಈ ಮಧ್ಯೆ ದೇಶದ 173 ಉಷ್ಣ ವಿದ್ಯುತ್ ಸ್ಥಾವರಗಳ ಪೈಕಿ, 106 ಸ್ಥಾವರಗಳಲ್ಲಿ ಕಲ್ಲಿದ್ದಲು ಸಂಗ್ರಹ ಶೋಚನೀಯ ಮಟ್ಟಕ್ಕೆ ಕುಸಿದಿದೆ.

ಉಷ್ಣ ವಿದ್ಯುತ್‌ ಸ್ಥಾವರಗಳು ಕನಿಷ್ಠ 26 ದಿನಗಳಿಗೆ ಆಗುವಷ್ಟು ಕಲ್ಲಿದ್ದಲು ಸಂಗ್ರಹ ಹೊಂದಿರಬೇಕು. ಕಲ್ಲಿದ್ದಲು ಸಂಗ್ರಹವು 6.5 ದಿನಗಳಿಗೆ ಮಾತ್ರ ಆಗುವಷ್ಟರ ಮಟ್ಟಿಗೆ ಕುಸಿದರೆ, ಅದನ್ನು ಶೋಚನೀಯ ಮಟ್ಟ ಎಂದು ಕರೆಯಲಾಗುತ್ತದೆ. ಈ ಎಲ್ಲಾ ಸ್ಥಾವರಗಳಲ್ಲಿ ಇರುವ ಕಲ್ಲಿದ್ದಲು ಸಂಗ್ರಹದ ದೈನಂದಿನ ವರದಿಯನ್ನು ಕೇಂದ್ರೀಯ ವಿದ್ಯುತ್ ಪ್ರಾಧಿಕಾರವು ಬಿಡುಗಡೆ ಮಾಡುತ್ತದೆ.

ಗುರುವಾರ ತಡರಾತ್ರಿ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಒಟ್ಟು 106 ಸ್ಥಾವರಗಳಲ್ಲಿ ಸಂಗ್ರಹ ಶೇ 25ಕ್ಕಿಂತಲೂ ಕಡಿಮೆ ಮಟ್ಟಕ್ಕೆ ಕುಸಿದಿದೆ. 150 ಸ್ಥಾವರಗಳಲ್ಲಿ ದೇಶೀಯ ಕಲ್ಲಿದ್ದಲನ್ನು ಬಳಸಲಾಗುತ್ತಿದೆ. ಇವುಗಳಲ್ಲಿ 86 ಸ್ಥಾವರಗಳಲ್ಲಿ ಕಲ್ಲಿದ್ದಲು ಸಂಗ್ರಹವು ಶೋಚನೀಯ ಮಟ್ಟಕ್ಕೆ ಕುಸಿದಿದೆ. ಕೆಲವು ಸ್ಥಾವರಗಳಲ್ಲಿ ಕೇವಲ ಒಂದೂವರೆ–ಎರಡು ದಿನಗಳಿಗೆ ಆಗುವಷ್ಟು ಸಂಗ್ರಹ ಮಾತ್ರ ಉಳಿದಿದೆ. ಆಮದು ಕಲ್ಲಿದ್ದಲು ಉಪಯೋಗಿಸುವ 12 ಸ್ಥಾವರಗಳಲ್ಲಿ ಕಲ್ಲಿದ್ದಲು ಸಂಗ್ರಹ ಶೋಚನೀಯ ಮಟ್ಟಕ್ಕೆ ಕುಸಿದಿದೆ. ಖಾಸಗಿ ವಲಯದ ಎಂಟು ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಇದೆ. ಅಖಿಲ ಭಾರತ ವಿದ್ಯುಚ್ಛಕ್ತಿ ಎಂಜಿನಿಯರ್‌ಗಳ ಒಕ್ಕೂಟವು (ಎಐಪಿಇಎಫ್‌) ಕಲ್ಲಿದ್ದಲು ಕೊರತೆ ಬಗ್ಗೆ ವಿಸ್ತೃತ ಹೇಳಿಕೆ ಬಿಡುಗಡೆ ಮಾಡಿದೆ.

Edited By : Vijay Kumar
PublicNext

PublicNext

30/04/2022 08:29 am

Cinque Terre

59.89 K

Cinque Terre

3

ಸಂಬಂಧಿತ ಸುದ್ದಿ