ನವದೆಹಲಿ: ದೇಶದಲ್ಲಿ ಅತಿ ಹೆಚ್ಚು ಜನಪ್ರಿಯವಾಗಿರುವ ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಯುಪಿಐ) ಪಾವತಿಗಳಿಗೆ ಯಾವುದೇ ಶುಲ್ಕ ವಿಧಿಸುವ ಪ್ರಸ್ತಾಪ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.
ಈ ಬಗ್ಗೆ ಹಣಕಾಸು ಸಚಿವಾಲಯ ಟ್ವೀಟ್ ಮಾಡಿದ್ದು, ಯುಪಿಐ ಸಾರ್ವಜನಿಕರಿಗೆ ಅಪಾರ ಅನುಕೂಲತೆ ಮತ್ತು ಆರ್ಥಿಕತೆಗೆ ಉತ್ಪಾದಕತೆಯ ಲಾಭಗಳೊಂದಿಗೆ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿದೆ. ಯುಪಿಐ ಸೇವೆಗಳಿಗೆ ಯಾವುದೇ ಶುಲ್ಕವನ್ನು ವಿಧಿಸಲು ಸರ್ಕಾರದಲ್ಲಿ ಯಾವುದೇ ಚಿಂತನೆ ಇಲ್ಲ. ವೆಚ್ಚ ವಸೂಲಾತಿಗಾಗಿ ಹಣದ ಪಾವತಿ ಸೇವಾ ಪೂರೈಕೆದಾರರ ಕಾಳಜಿಯಿಂದ ಹಣದ ಪಾವತಿಗೆ ತಗಲುವ ವೆಚ್ಚವನ್ನು ಇತರ ವಿಧಾನಗಳ ಮೂಲಕ ಪೂರೈಸಬೇಕು ಎಂದು ತಿಳಿಸಿದೆ.
ದೇಶದಲ್ಲಿ ಪ್ರಸ್ತುತ 338 ಬ್ಯಾಂಕುಗಳು ಯುಪಿಐ ಸೇವಾ ವ್ಯವಸ್ಥೆಯಲ್ಲಿ ನೋಂದಾಯಿಸಿಕೊಂಡಿವೆ. ಪ್ರತಿದಿನ 21 ಕೋಟಿಗೂ ಹೆಚ್ಚಿನ ಮೊತ್ತದ ವಹಿವಾಟು ನಡೆಯುತ್ತಿದೆ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ ಅಂಕಿಅಂಶಗಳ ತಿಳಿಸುತ್ತವೆ.
PublicNext
22/08/2022 08:06 am