ನವದೆಹಲಿ: ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ರಾಜೀವ್ ಮೆಹ್ರಿಷಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಮತ್ತು ಇಂಡಿಕಾರ್ಪ್ಸ್ ಮತ್ತು ಪಿರಮಲ್ ಫೌಂಡೇಶನ್‌ನ ಮಾಜಿ ಸಿಇಒ ಆನಂದ್ ಶಾ ಅವರನ್ನು ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ಕೇಂದ್ರ ಸರ್ಕಾರವು ನಾಮನಿರ್ದೇಶನ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿಗಳ ಮಂಡಳಿಯ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರ್ಮನ್ ಅವರೊಂದಿಗೆ ಹೊಸದಾಗಿ ನೇಮಕಗೊಂಡ ಸದಸ್ಯರು ಭಾಗವಹಿಸಿದ್ದರು. ಇಂದು ಪಿಎಂ ಕೇರ್ಸ್ ನಿಧಿಯ ಟ್ರಸ್ಟಿ ಹಾಗೂ ಸಲಹಾ ಮಂಡಳಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡಿದೆ ಘೋಷಣೆ ಮಾಡಲಾಗಿದೆ.
ಇನ್ನು ಕೈಗಾರಿಕೋದ್ಯಮಿ ರತನ್ ಟಾಟಾ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಕೆಟಿ ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಅವರನ್ನು ಪಿಎಂ-ಕೇರ್ಸ್ ಫಂಡ್ ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ.
PublicNext
21/09/2022 06:09 pm