ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ದಿನೇ ದಿನೇ ಹೆಚ್ಚಾಗುತ್ತಿದೆ. ಪರಿಣಾಮ ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿವೆ.
ಅದರಲ್ಲೂ ಪಾಕಿಸ್ತಾನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಡುಗೆ ಎಣ್ಣೆ ಬೆಲೆ ಪ್ರತಿ ಕೆಜಿಗೆ 208 ರೂ. ಹಾಗೂ ತುಪ್ಪದ ಬೆಲೆ ಪ್ರತಿ ಕೆಜಿಗೆ 213 ರೂ. ಹೆಚ್ಚಾಗಿದೆ. ಇದರಿಂದ ಅಡುಗೆ ಎಣ್ಣೆ 1 ಕೆಜಿಗೆ 555 ರೂಪಾಯಿ ಆಗಿದ್ದರೆ, 1 ಕೆಜಿ ತುಪ್ಪದ ಬೆಲೆ 605 ರೂಪಾಯಿ ಆಗಿದೆ.
ಈಗಾಗಲೇ ಪಾಕಿಸ್ತಾನ ಸರ್ಕಾರ ವಿದೇಶಿ ವಿನಿಮಯ ಸರಿದೂಗಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದೆ. ಆದರೂ ದೇಶದಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದು, ಇದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ.
PublicNext
02/06/2022 09:02 pm