ಮಂಗಳೂರು: ‘ಹಳೆಯ ನೋಟುಗಳಂತೆ ಕಾಣುವ ಖೋಟಾ ನೋಟುಗಳು ಹೆಚ್ಚಾಗಿರುವುದರಿಂದ 100ರ ಮುಖಬೆಲೆಯ ಹಳೆಯ ಸರಣಿಯ ನೋಟುಗಳನ್ನು ಹಿಂಪಡೆಯಲಾಗುತ್ತಿದೆ ಎಂದು ಆರ್ ಬಿಐ ಸಹಾಯಕ ಮಹಾಪ್ರಬಂಧಕ ಬಿ.ಎಂ.ಮಹೇಶ್ ತಿಳಿಸಿದರು.
ಜಿಲ್ಲಾ ಬ್ಯಾಂಕಿಂಗ್ ಭದ್ರತಾ ಸಮಿತಿ ಮತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದ್ದು ಈಗಾಗಲೇ ಬಿಡುಗಡೆಗೊಂಡಿರುವ100 ರೂ ಮುಖಬೆಲೆಯ ಸ್ವಚ್ಛವಾದ ಹೊಸ ಸರಣಿಯ ನೋಟುಗಳು ಜನರ ಕೈಯಲ್ಲಿರುವಂತೆ ಮಾಡುವ ಉದ್ದೇಶ ಹೊಂದಿರುವ ಭಾರತೀಯ ರಿಸರ್ವ್ ಬ್ಯಾಂಕ್ ಹಳೇ ಸರಣಿಯ ಎಲ್ಲಾ ನೋಟುಗಳನ್ನು ಹಿಂಪಡೆಯುವ ನಿರ್ಧಾರಕ್ಕೆ ಬಂದಿದೆ.
ಹಳೆಯ ಸೀರೀಸ್ ಹೊಂದಿರುವ 100 ರ ಕರೆನ್ಸಿ ನೋಟುಗಳನ್ನು ಮಾರ್ಚ್ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಹಿಂಪಡೆಯುವ ನಿರ್ಧಾರಕ್ಕೆ ಬರಲಾಗಿದೆ. ಕಳೆದ ಆರು ವರ್ಷಗಳಿಂದ ಈ ನೋಟುಗಳು ಮುದ್ರಣವಾಗುತ್ತಿಲ್ಲ. ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯುತ್ತ ಬರಲಾಗಿದೆ’ ಎಂದರು.
‘ಜನತೆ ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ಇದು ಡಿಮಾನಿಟೈಸೇಷನ್ ಅಲ್ಲ.ಹೊಸ ಸೀರೀಸ್ ಹೊಂದಿರುವ 100 ರ ಮುಖಬೆಲೆಯ ನೋಟುಗಳು ಮಾತ್ರ ಚಲಾವಣೆಯಲ್ಲಿರಬೇಕು.
PublicNext
22/01/2021 07:42 am