ಭಾರತದಲ್ಲಿ ಒಂದು ವಾರದಿಂದ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಕೊಂಚ ಇಳಿಕೆಯಾಗಿದೆ. ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 48,290 ರೂ. ಆಗಿದೆ. 22 ಕ್ಯಾರೆಟ್ ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 44,250 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು, 2 ದಿನಗಳ ಹಿಂದೆ 68 ಸಾವಿರವಿದ್ದ ಬೆಳ್ಳಿ ಬೆಲೆ ಇಂದು 69 ಸಾವಿರಕ್ಕೆ ಏರಿದೆ.
ಭಾರತದಲ್ಲಿ 2 ದಿನಗಳ ಹಿಂದೆ 47,020 ರೂ. ಇದ್ದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 46,340 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,020 ರೂ. ಇದ್ದುದು ಇಂದು 47,340 ರೂ. ಆಗಿದೆ.
ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.
ಭಾರತದಲ್ಲಿ ಬೆಳ್ಳಿ ಬೆಲೆ ಮತ್ತೆ ಏರಿಕೆಯಾಗಿದ್ದು, ನಿನ್ನೆ 68 ಸಾವಿರವಿದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 69,200 ರೂ. ಆಗಿದೆ.
PublicNext
14/02/2021 11:23 am