ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸತತ 11ನೇ ದಿನವು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ

ಬೆಂಗಳೂರು : ದೇಶದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಸತತ 11ನೇ ದಿನ ಏರಿಕೆ ಕಾಣುತ್ತಿದ್ದು, ಬೆಲೆ ಏರಿಕೆ ಕಂಡಿದೆ. ತೈಲ ಬೆಲೆ ಇಂದು ಮತ್ತೆ ಹೊಸ ಸಾರ್ವಕಾಲಿಕ ದಾಖಲೆ ಬರೆದಿದೆ. ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 31 ಪೈಸೆ ಏರಿಸಿ 1 ಲೀಟರ್ ಪೆಟ್ರೋಲ್ ಅನ್ನು 107.14 ರೂ.ಗೆ ಮಾರಾಟ ಮಾಡಲಾಗುತ್ತಿದೆ.

ಬಳ್ಳಾರಿ ಲೀಟರ್ ಪೆಟ್ರೋಲ್ ಗೆ 22 ಪೈಸೆ ಏರಿಸಲಾಗಿದ್ದು, ಅತ್ಯಧಿಕ 109.19 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ, ಪೆಟ್ರೋಲ್ ಬೆಲೆ ಶೀಘ್ರದಲ್ಲೆ 110 ರೂ ದಾಟುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ.

ಡೀಸೆಲ್ ಬೆಲೆಯನ್ನೂ ಏರಿಸಲಾಗಿದ್ದು, ದಾವಣಗೆರೆಯಲ್ಲಿ ಲೀಟರ್ ಗೆ 99 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಪ್ರಸ್ತುತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಹ ಇಂದು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಗಣನೀಯ ಏರಿಕೆ ಕಂಡಿದೆ.

ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 101.01 ರೂ. ಡೀಸೆಲ್ ಬೆಲೆ 96.60 ರೂ.ಹೈದ್ರಾಬಾದ್ ನಲ್ಲಿ ಪೆಟ್ರೋಲ್ ಬೆಲೆ 109.76 ರೂ ಡೀಸೆಲ್ ಬೆಲೆ 101.24 ರೂ.ಗೆ ದೆಹಲಿಯಲ್ಲಿ ಪೆಟ್ರೋಲ್ 103.54 ರೂ ಮತ್ತು ಡೀಸೆಲ್ 92.12 ರೂ.ಗೆ ಮಾರಾಟ ಮಾಡಲಾಗುತ್ತಿದೆ.

Edited By : Nirmala Aralikatti
PublicNext

PublicNext

09/10/2021 07:36 am

Cinque Terre

28.06 K

Cinque Terre

5

ಸಂಬಂಧಿತ ಸುದ್ದಿ