ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಕಿಪೊಟ್ಟಣಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ: 14 ವರ್ಷಗಳ ಬಳಿಕ ಶೇ.100 ರಷ್ಟು ಬೆಲೆ ಹೆಚ್ಚಳ

ಚೆನ್ನೈ: ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್, ಎಲ್‌ಪಿಜಿ ಸಿಲಿಂಡರ್‌, ದಿನ ಬಳಕೆ ವಸ್ತುಗಳ ಬೆಲೆ ಹೆಚ್ಚಾಗುತ್ತಲೇ ಇದೆ. ಇದರ ನಡುವೆ ಬರೋಬ್ಬರಿ 14 ವರ್ಷಗಳ ಬಳಿಕ ಬೆಂಕಿಪೊಟ್ಟಣಕ್ಕೂ ಬೆಲೆ ಏರಿಕೆ ಬಿಸಿ ತಟ್ಟಿದ್ದು, ಬೆಂಕಿಪೊಟ್ಟಣದ ಬೆಲೆಯಲ್ಲಿ ಶೇ.100 ರಷ್ಟು ಏರಿಕೆ ಮಾಡಲು ನಿರ್ಧರಿಸಲಾಗಿದೆ.

ಡಿಸೆಂಬರ್ 1ರಿಂದ ಬೆಂಕಿಪೊಟ್ಟಣದ ಬೆಲೆ 2 ರೂಪಾಯಿ ಆಗಲಿದೆ. ತಮಿಳುನಾಡಿನ ಶಿವಕಾಶಿಯಲ್ಲಿ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚಸ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 2007ರಲ್ಲಿ ಬೆಂಕಿ ಪೊಟ್ಟಣದ ಬೆಲೆಯನ್ನು 50 ಪೈಸೆಯಿಂದ 1 ರೂಪಾಯಿಗೆ ಹೆಚ್ಚಿಸಲಾಗಿತ್ತು.

ಬೆಲೆ ಏರಿಕೆಗೆ ಕಾರಣವೇನು?:

ಬೆಂಕಿಕಡ್ಡಿಗಳನ್ನು ತಯಾರಿಸಲು 14 ಬಗೆಯ ಕಚ್ಚಾ ಸಾಮಗ್ರಿಗಳು ಬೇಕಾಗುತ್ತವೆ. ಒಂದು ಕೆಜಿ ಕೆಂಪು ರಂಜಕ ರೂ. 425 ರಿಂದ ರೂ. 810 ಕ್ಕೆ, ಮೇಣ ರೂ. 58 ರಿಂದ ರೂ. 80 ಕ್ಕೆ, ಹೊರ ಬಾಕ್ಸ್ ಬೋರ್ಡ್ ರೂ. 36 ರಿಂದ ರೂ. 55 ಕ್ಕೆ ಮತ್ತು ಒಳ ಪೆಟ್ಟಿಗೆ ಬೋರ್ಡ್ ರೂ. 32 ರಿಂದ ರೂ. 58 ಕ್ಕೆ ಏರಿಕೆಯಾಗಿದೆ.

ಅಕ್ಟೋಬರ್ 10ರಿಂದ ಪೇಪರ್, ಸ್ಪ್ಲಿಂಟ್ಸ್, ಪೊಟ್ಯಾಸಿಯಮ್ ಕ್ಲೋರೇಟ್ ಮತ್ತು ಸಲ್ಫರ್ ಬೆಲೆಯೂ ಹೆಚ್ಚಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ಉದ್ಯಮದ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ. ಹೀಗಾಗಿ ಬೆಂಕಿಪೊಟ್ಟಣ ತಯಾರಕರು ಬೆಲೆಯೇರಿಕೆಯ ನಿರ್ಧಾರವನ್ನು ಅವಿರೋಧವಾಗಿ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಸದ್ಯ 600 ಬೆಂಕಿ ಪೊಟ್ಟಣಗಳ ಒಂದು ಬಂಡಲ್ 270ರಿಂದ 300 ರೂಪಾಯಿಗೆ ಮಾರಾಟವಾಗುತ್ತಿದೆ. ಅದನ್ನು 430ರಿಂದ 480 ರೂಪಾಯಿಗೆ ಏರಿಸಲು ನಿರ್ಧರಿಸಲಾಗಿದೆ.

Edited By : Vijay Kumar
PublicNext

PublicNext

24/10/2021 12:04 pm

Cinque Terre

62.92 K

Cinque Terre

8

ಸಂಬಂಧಿತ ಸುದ್ದಿ