ಹಬ್ಬದ ಸಂಭ್ರಮದಲ್ಲಿರುವವರಿಗೆ ಬೆಲೆ ಬಿಸಿ ಶಾಕ್ ಕೊಟ್ಟಿದೆ. ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಭರ್ಜರಿ ಹೆಚ್ಚಾಗಿದೆ. ಸಮಾಧಾನ ಎಂದರೆ 14.5 ಕೆಜಿಯ ಮನೆ ಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ 19 ಕೆಜಿಯ ಕಮರ್ಷಿಯಲ್ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ ಬರೋಬ್ಬರಿ 265 ರೂಪಾಯಿ ಹೆಚ್ಚಾಗಿದೆ.
ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 265 ರೂ.ಹೆಚ್ಚಾದ ಬಳಿಕ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 2000 ರೂ.ಗೆ ಏರಿಕೆಯಾಗಿದೆ. ಈ ಹಿಂದೆ 1733 ರೂಪಾಯಿ ಇತ್ತು. ಹಾಗೇ ಮುಂಬೈನಲ್ಲಿ 1,683 ರೂಪಾಯಿ ಇದ್ದ 19 ಕೆಜಿ ಕಮರ್ಷಿಯಲ್ ಎಲ್ ಪಿಜಿ ಸಿಲಿಂಡರ್ ಬೆಲೆ ಈಗ 1950ರೂಪಾಯಿಗೆ ಏರಿದೆ. ಕೋಲ್ಕತ್ತದಲ್ಲಿ 2073ರೂ.ಗೆ ಏರಿಕೆಯಾಗಿದ್ದು, ಚೆನ್ನೈನಲ್ಲಿ 2133 ರೂಪಾಯಿ ಆಗಿದೆ.
14.2 ಕೆಜಿ ತೂಕದ ಮನೆ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ದೆಹಲಿಯಲ್ಲಿ 14.2 ಕೆಜಿ ತೂಕದ ಎಲ್ ಪಿಜಿ ಸಿಲಿಂಡರ್ ಬೆಲೆ (ಸಬ್ಸಿಡಿ ರಹಿತ) 899.50 ರೂ. ಇದೆ. ಕೋಲ್ಕತ್ತದಲ್ಲಿ 926 ರೂ.ಇದ್ದರೆ, ಚೆನ್ನೈನಲ್ಲಿ 915.50 ರೂಪಾಯಿ ಇದೆ.
PublicNext
01/11/2021 09:27 am