ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಮಾನ್ಯರಿಗೆ ಮತ್ತೊಂದು ಶಾಕ್: ಶತಕದತ್ತ ಟೊಮೆಟೊ ಬೆಲೆ

ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಸಾಮಾನ್ಯ ಜನ ಕಂಗಾಲಾಗಿದ್ದಾರೆ. ಪೆಟ್ರೋಲ್ ಬಳಿಕ ಇದೀಗ ಟೊಮೆಟೊ ಬೆಲೆ ಶತಕದಾಟಿದೆ. ಬೆಂಗಳೂರಿನಲ್ಲಿ 1 ಕೆಜಿ ಟೊಮೆಟೊ ಬೆಲೆ 100 ರೂ. ಗಡಿ ದಾಟಿದೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಟೊಮೊಟೊ ಬೆಲೆ 100 ರೂ. ಗಡಿ ದಾಟಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ 1 ಕೆ.ಜಿ ಬೆಲೆ 98-100 ರೂ. ಮತ್ತು ಹಾಪ್‌ಕಾಮ್ಸ್ ಮಳಿಗೆಗಳಲ್ಲಿ 93 ರೂ. ಗೆ ಏರಿಕೆಯಾಗಿದೆ.

ಭಾರೀ ಮಳೆಯಿಂದಾಗಿ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಟೊಮೊಟೊ ಬೆಳೆ ಹಾನಿಯಾಗಿದೆ. ಹೀಗಾಗಿ ಟೊಮೆಟೊ ಬೆಲೆ ಏರಿಕೆಯಾಗುತ್ತಿದೆ ಎನ್ನಲಾಗಿದೆ.

Edited By : Nagaraj Tulugeri
PublicNext

PublicNext

20/11/2021 01:28 pm

Cinque Terre

42.23 K

Cinque Terre

0

ಸಂಬಂಧಿತ ಸುದ್ದಿ