ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿನ್ನದ ದರದಲ್ಲಿ ಭಾರಿ ಇಳಿಕೆ

ಬೆಂಗಳೂರು: ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ನಿನ್ನೆ ಆಭರಣದ ಬೆಲೆ ಇಳಿಕೆಯಾಗಿತ್ತು. ಇಂದು ಕೂಡ ಚಿನ್ನದ ದರ ಇಳಿಕೆಯಾಗಿದೆ.

ಬೆಳ್ಳಿ ದರ ಕೂಡ ಇಳಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,400 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 62,400 ರೂಪಾಯಿ ನಿಗದಿಯಾಗಿದೆ.

Edited By : Nagaraj Tulugeri
PublicNext

PublicNext

04/01/2022 01:00 pm

Cinque Terre

36.93 K

Cinque Terre

1

ಸಂಬಂಧಿತ ಸುದ್ದಿ