ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಡುತ್ತಿದೆ ಸಿಲಿಂಡರ್ : ಮತ್ತೆ LPG ಸಿಲಿಂಡರ್ ಬೆಲೆ ಏರಿಕೆ ಶಾಕ್

ನವದೆಹಲಿ : ದುಬಾರಿ ದುನಿಯಾದಲ್ಲಿ ಬದುಕು ದುಸ್ಥರವಾಗುತ್ತಿದೆ. ಸದ್ಯ ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿ ಜಿ ಸಿಲಿಂಡರ್ ಬೆಲೆ 105 ರೂ.ಗೆ ಏರಿಕೆಯಾಗಿದೆ.

ದೆಹಲಿಯಲ್ಲಿ ಇಂದಿನಿಂದ 105 ರೂ. ಮತ್ತು ಕೋಲ್ಕತ್ತಾದಲ್ಲಿ 108 ರೂ. ಹೆಚ್ಚಿಸಿದೆ. ಈ ಮೂಲಕ ಮಂಗಳವಾರದಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,012 ರೂ. ಆಗಿದೆ.

5 ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯೂ 27 ರೂ. ಏರಿಕೆಯಾಗಿದೆ. ಈಗ ದೆಹಲಿಯಲ್ಲಿ 5 ಕೆಜಿ ಸಿಲಿಂಡರ್ ಬೆಲೆ 569 ರೂ. ಆಗಿದೆ. ಆದರೆ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಹೆಚ್ಚಳವಾಗಿಲ್ಲ.

ಫೆಬ್ರವರಿ 1 ರಂದು ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗಳಷ್ಟು ಕಡಿತಗೊಳಿಸಿತ್ತು. ಆದರೆ ಇದೀಗ ದಿಢೀರ್ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿರುವುದು ಜನರಿಗೆ ಶಾಕ್ ನೀಡಿದೆ.

Edited By : Nirmala Aralikatti
PublicNext

PublicNext

01/03/2022 12:01 pm

Cinque Terre

35.73 K

Cinque Terre

17

ಸಂಬಂಧಿತ ಸುದ್ದಿ