ಮುಂಬೈ: ರಷ್ಯಾ, ಉಕ್ರೇನ್ ಯುದ್ಧ ಭೀಕರ ಸ್ವರೂಪ ಪಡೆಯುತ್ತಿರುವ ಪರಿಣಾಮ ಇಂದು (ಮಾರ್ಚ್ 07) ಮುಂಬೈ ಷೇರುಪೇಟೆಯಲ್ಲಿ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಭಾರೀ ಪತನ ಕಂಡಿದೆ.
ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 1,537.22 ಅಂಕಗಳಷ್ಟು ಭಾರೀ ಕುಸಿತ ಕಂಡಿದ್ದು, 52,796.59 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್‌ಎಸ್‌ಇ ನಿಫ್ಟಿ ಕೂಡ 433.65 ಅಂಕ ಪತನಗೊಂಡಿದ್ದು, 15,811.70 ಅಂಕಗಳ ಮಟ್ಟ ತಲುಪಿದ್ದು, ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ.
ಸೆನ್ಸೆಕ್ಸ್ ಇಳಿಕೆಯಿಂದಾಗಿ ಟಿವಿಎಸ್ ಮೋಟಾರ್ ಕಂಪನಿ ಲಿಮಿಟೆಡ್, ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್, ಅಶೋಕ್ ಲೇಲ್ಯಾಂಡ್, ಈಚರ್ ಮೋಟಾರ್ಸ್, ಟಾಟಾ ಮೋಟಾರ್ಸ್ ಷೇರುಗಳು ಭಾರೀ ನಷ್ಟ ಕಂಡಿದೆ.
PublicNext
07/03/2022 10:50 am