ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರಿ ಪತನ ಕಂಡ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್: ಹೂಡಿಕೆದಾರರಿಗೆ 3.39 ಲಕ್ಷ ಕೋಟಿ ರೂ. ನಷ್ಟ!

ಮುಂಬೈ: ಜಾಗತಿಕ ಷೇರುಮಾರುಕಟ್ಟೆಯ ನೀರಸ ವಹಿವಾಟು ಹಾಗೂ ರಷ್ಯಾ, ಉಕ್ರೇನ್ ನಡುವಿನ ಯುದ್ಧ ಮುಂದುವರಿದ ಪರಿಣಾಮ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಭಾರೀ ಪತನ ಕಂಡಿದ್ದು, 1,172.19 ಅಂಕಗಳ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಪ್ರಮುಖ ಕಂಪನಿಗಳ ಷೇರುಗಳ ಬೆಲೆ ನೆಲಕಚ್ಚಿದೆ. ಹೂಡಿಕೆದಾರರು ದಾಖಲೆಯ 3.39 ಲಕ್ಷ ಕೋಟಿ ರೂ. ಮೌಲ್ಯದ ಸಂಪತ್ತು ಕಳೆದುಕೊಂಡಿದ್ದಾರೆ.

ಇಂದು ವಹಿವಾಟು ಆರಂಭಗೊಳ್ಳುತ್ತಿದ್ದಂತೆ ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಹಾಗು ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿಯಲ್ಲಿ ಭಾರಿ ಇಳಿಕೆ ಕಂಡುಬಂತು. ಪರಿಣಾಮ, ಹೂಡಿಕೆದಾರರು ಕೈ ಸುಟ್ಟುಕೊಂಡರು. ಪ್ರಮುಖವಾಗಿ ಇನ್ಫೋಸಿಸ್, ಹೆಚ್​ಡಿಎಫ್​ಸಿ, ಟೆಕ್ ಮಹೀಂದ್ರಾ, ಹೆಚ್‌ಸಿಎಲ್ ಟೆಕ್, ವಿಪ್ರೋ ಷೇರುಗಳು ಹಿನ್ನೆಡೆ ಅನುಭವಿಸಿದವು.

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,172.19 ಅಂಕ ಇಳಿಕೆಯಾಗಿದ್ದು, 57,166.74 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಷೇರುಪೇಟೆಯ ಮಧ್ಯಂತರ ವಹಿವಾಟಿನಲ್ಲಿ 1,496.54 ಅಂಕ ಕುಸಿತ ಕಂಡಿದ್ದು, 56,842.39 ಅಂಕಗಳಲ್ಲಿ ವಹಿವಾಟು ನಡೆದಿತ್ತು. ಮತ್ತೊಂದೆಡೆ ಎನ್‌ಟಿಪಿಸಿ, ಟಾಟಾ ಸ್ಟೀಲ್, ಮಾರುತಿ, ಟೈಟಾನ್, ನೆಸ್ಲೆ, ಮಹೀಂದ್ರ ಆ್ಯಂಡ್ ಮಹೀಂದ್ರ ಷೇರುಗಳು ಲಾಭಗಳಿಸಿದೆ. ಇಂದು ಇನ್ಫೋಸಿಸ್, ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ಭರ್ಜರಿ ನಷ್ಟ ಕಂಡಿರುವುದಾಗಿ ಮಾರುಕಟ್ಟೆ ವಿಶ್ಲೇಷಕರು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

18/04/2022 06:08 pm

Cinque Terre

29.66 K

Cinque Terre

0

ಸಂಬಂಧಿತ ಸುದ್ದಿ