ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಇತ್ತೀಚೆಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು ಇನ್ಮುಂದೆ ಬ್ಯಾಂಕ್ ಗಳು ಬೆಳಿಗ್ಗೆ 9 ರಿಂದ ಸಂಜೆ 5ರ ವರೆಗೆ ಕಾರ್ಯ ನಿರ್ವಹಿಸಲಿವೆ ಎಂದು ಹೇಳಿದೆ.
ಕೊರೊನಾ ಸಾಂಕ್ರಾಮಿಕದ ಪ್ರಾರಂಭದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್ ಗಳ ತೆರೆಯುವ ಸಮಯವನ್ನು ಕಡಿಮೆ ಮಾಡಿತ್ತು. ಈಗ ವೈರಸ್ ಕಡಿಮೆಯಾಗಿದೆ, ಬ್ಯಾಂಕ್ ಗಳು ತಮ್ಮ ತೆರೆಯುವ ಸಮಯವನ್ನು ಹೆಚ್ಚಿಸಲು ನಿರ್ಧರಿಸಿವೆ.
ಇನ್ನು ಷೇರು ಮಾರುಕಟ್ಟೆಯ ವಹಿವಾಟು ಕೂಡ ಬೆಳಗ್ಗೆ 9 ಗಂಟೆಗೆ ಆರಂಭವಾಗಿ ಮಧ್ಯಾಹ್ನ 3:30ಕ್ಕೆ ಕೊನೆಗೊಳ್ಳಲಿದೆ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ.
PublicNext
19/04/2022 09:11 pm