ಮುಂಬೈ: ಜಾಗತಿಕ ಷೇರು ಮಾರುಕಟ್ಟೆಯ ನೀರಸ ವಹಿವಾಟಿನ ಪರಿಣಾಮ ಗುರುವಾರ (ಮೇ 19) ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಪರಿಣಾಮ ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ.
ಮುಂಬೈ ಷೇರುಪೇಟೆ ಸೆನ್ಸೆಕ್ಸ್ 1,416.30 ಅಂಕಗಳಷ್ಟು ಇಳಿಕೆಯಾಗಿದ್ದು, 52,792.23 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್‌ಎಸ್‌ಇ ನಿಫ್ಟಿ 430.90 ಅಂಕಗಳಷ್ಟು ಕುಸಿತವಾಗಿದ್ದು, 15,890.40 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ವಿಪ್ರೋ, ಎಚ್‌ಸಿಎಲ್ ಟೆಕ್ನಾಲಜೀಸ್, ಟಿಸಿಎಸ್, ಟೆಕ್ ಮಹೀಂದ್ರ ಮತ್ತು ಇನ್ಫೋಸಿಸ್ ಷೇರುಗಳು ಭಾರೀ ನಷ್ಟ ಕಂಡಿದೆ. ಮತ್ತೊಂದೆಡೆ ಐಟಿಸಿ, ಡಾ.ರೆಡ್ಡೀಸ್ ಲ್ಯಾಬೋರೇಟರೀಸ್ ಮತ್ತು ಪವರ್ ಗ್ರಿಡ್ ಕಾರ್ಪೋರೇಷನ್ ಷೇರುಗಳು ಲಾಭಗಳಿಸಿದೆ.
ರಿಲಯನ್ಸ್, ಎಚ್‌ಡಿಎಫ್ ಸಿ ಬ್ಯಾಂಕ್, ಟಾಟಾ ಮೋಟಾರ್ಸ್, ಐಎನ್‌ಎಫ್‌ವೈ, ಐಸಿಐಸಿಐ ಬ್ಯಾಂಕ್, ಎಸ್ ಬಿಐಎನ್ ಷೇರುಗಳು ನಷ್ಟ ಕಂಡಿರುವುದಾಗಿ ವರದಿ ತಿಳಿಸಿದೆ.
PublicNext
19/05/2022 05:59 pm