ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮತ್ತೆ ಸ್ವಲ್ಪ ಏರಿಕೆಯಾದ ಚಿನ್ನದ ಬೆಲೆ

ಬೆಂಗಳೂರು: ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಒಂದು ಗ್ರಾಂಗೆ ರೂ. 10 ರೂ. ಏರಿಕೆಯಾಗಿದೆ. ನಿನ್ನೆ ಒಂದು ಗ್ರಾಂ ಆಭರಣದ ಚಿನ್ನದ ಬೆಲೆ ರೂ. 4,760 ಇದ್ದದ್ದು ಇಂದು 4,770 ರೂಪಾಯಿಗೆ ಏರಿದೆ.

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (10 ಗ್ರಾಂ) 47,700 ರೂ. ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ 47,760 ರೂ., 47,700 ರೂ ಹಾಗೂ 47,700 ರೂ. ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,700 ರೂ. ಆಗಿದೆ.

ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಅತ್ಯಲ್ಪ ಏರಿಕೆಯಾಗಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 62,100 ರೂ. ಆಗಿದೆ.

ಪ್ರಸ್ತುತ, ಬೆಂಗಳೂರು ನಗರದಲ್ಲಿ ಇಂದು 1ಕೆಜಿ ಬೆಳ್ಳಿ ದರವು 68,000 ರೂ. ಆಗಿದೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರವು 68,000 ರೂ. ಆಗಿದ್ದರೆ, ದೆಹಲಿಯಲ್ಲಿ 62,100 ರೂ., ಮುಂಬೈನಲ್ಲಿ 62,100 ರೂ. ಹಾಗೂ ಕೋಲ್ಕತ್ತಾದಲ್ಲೂ 62,100 ರೂ.ಗಳಾಗಿದೆ.

Edited By : Vijay Kumar
PublicNext

PublicNext

09/06/2022 08:27 am

Cinque Terre

51.11 K

Cinque Terre

0

ಸಂಬಂಧಿತ ಸುದ್ದಿ