ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಿಯಲ್ ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್ ಫೋನ್

ಅತ್ಯುತ್ತಮ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದ ರಿಯಲ್ ಮಿ ಕಂಪನಿ ಇದೀಗ ರಿಯಲ್ ಮಿ ನಾರ್ಜೊ 50ಐ ಪ್ರೈಮ್ ಫೋನ್ ಬಿಡುಗಡೆ ಮಾಡಿದೆ. ವಿದೇಶಿ ಮಾರುಕಟ್ಟೆಯಲ್ಲಿ ಈ ಫೋನ್ ಅನಾವರಣಗೊಂಡಿದ್ದು, ಅತ್ಯಂತ ಕಡಿಮೆ ಬೆಲೆಯ ಬೆಸ್ಟ್ ಫೋನ್ ಆಗಿದೆ. ಇದು ಸಿಂಗಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಜೊತೆಗೆ ಬಲಿಷ್ಠವಾದ ಬ್ಯಾಟರಿ ನೀಡಲಾಗಿದೆ.

ರಿಯಲ್ ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್ ಫೋನ್ ಒಂದು ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಬೆಲೆ $99.99. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 7,820 ರೂ. ಎನ್ನಬಹುದು.

ರಿಯಲ್ ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್ ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್ಡಿ+ ಡಿಸ್ ಪ್ಲೇಯನ್ನು ನೀಡಲಾಗಿದೆ.

12nm ಆಕ್ಟಾ-ಕೋರ್ ಪ್ರೊಸೆಸರ್ ಬಲ ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್ ಮಿ ಗೋ UI ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ.ಇನ್ನು ಈ ಸ್ಮಾರ್ಟ್ ಫೋನ್ ಸಿಂಗಲ್ ಕ್ಯಾಮೆರಾ ಸೆಟಪ್ ಹೊಂದಿದ್ದು 8 ಮೆಗಾಫಿಕ್ಸೆಲ್ ನಿಂದ ಆವೃತ್ತವಾಗಿದೆ. 5 ಮೆಗಾಪಿಕ್ಸೆಲ್ AI ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ರಿಯಲ್ ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್ ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 18W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

Edited By : Nirmala Aralikatti
PublicNext

PublicNext

25/06/2022 04:19 pm

Cinque Terre

18.91 K

Cinque Terre

1

ಸಂಬಂಧಿತ ಸುದ್ದಿ